AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತರ ಪ್ರತಿಭಟನೆಗೆ ನಟಿ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ

ಆಶಾ ಕಾರ್ಯಕರ್ತರ ಪ್ರತಿಭಟನೆಗೆ ನಟಿ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ

ರಾಜೇಶ್ ದುಗ್ಗುಮನೆ
|

Updated on: Nov 25, 2026 | 2:21 PM

Share

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತರು 9 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಗೆ ನಟಿ ತಾರಾ ಬೆಂಬಲ ನೀಡಿದ್ದಾರೆ. ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಮಾಡುತ್ತಿರುವ ಮಹಿಳೆಯರ ನೋವನ್ನು ಆಲಿಸಿದ ತಾರಾ, ಮಹಿಳೆಯರು ಮನೆಯ ಜವಾಬ್ದಾರಿ ನಿಭಾಯಿಸಿ ದುಡಿಯುವುದರ ಮಹತ್ವವನ್ನು ವಿವರಿಸಿ, ಅವರ ದುಡಿಮೆಗೆ ಸೂಕ್ತ ಸಂಭಾವನೆ ದೊರೆಯಬೇಕು ಎಂದು ಒತ್ತಾಯಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟಕ್ಕೆ ಚಲನಚಿತ್ರ ನಟಿ ತಾರಾ ಅವರು ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನಾನಿರತ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು.

ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೆ ಕಳೆದ ಒಂಬತ್ತು ದಿನಗಳಿಂದ ಆಶಾ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ತಮ್ಮ ಕುಟುಂಬದ ಭವಿಷ್ಯವನ್ನು ನೋಡಿಕೊಳ್ಳಲು ಮತ್ತು ಗೌರವಯುತವಾಗಿ ಬದುಕಲು ಸೂಕ್ತ ಸಂಭಾವನೆಯನ್ನು ಒದಗಿಸಬೇಕೆಂದು ಅವರು ಆಗ್ರಹಿಸುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ಗೌರವಧನ ತಮ್ಮ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ತಾರಾ ಅವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.

‘ಹೆಣ್ಣುಮಕ್ಕಳು ಕಷ್ಟಪಟ್ಟು ದುಡಿದರೆ ಅದನ್ನು ಉಳಿಸಿ ಕುಟುಂಬಕ್ಕೆ ಉಪಯೋಗಿಸುತ್ತಾರೆ. ಆಶಾ ಕಾರ್ಯಕರ್ತರು ದೇಶಕ್ಕೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ, ಆರೋಗ್ಯ ಕ್ಷೇತ್ರದಲ್ಲಿ ನೀಡುತ್ತಿರುವ ಸೇವೆಯನ್ನು ಮರೆಯಲಾಗದು. ಜನ್ಮ ನೀಡುವ ಹಿರಿಯರಿಗೆ ಸೇವೆ ಸಲ್ಲಿಸುವ ಕೆಲಸವನ್ನು ಮಾಡುತ್ತಿರುವ ಇವರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ನಟಿ ತಾರಾ ಹೇಳಿದರು. ಮಹಿಳೆಯರ ಈ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More