ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

Updated on: Jan 09, 2025 | 9:31 PM

ಹಿರಿಯ ನಟಿ ತಾರಾ ಅವರಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಉತ್ತರ ಕರ್ನಾಟಕದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತಾಡಿದರು. ‘ಈ ಭಾಗಕ್ಕೂ ನನಗೂ ಅವಿನಾಭಾವ ನಂಟು ಇದೆ’ ಎಂದು ಅವರು ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದಲ್ಲಿ ತಾರಾ ಅನುರಾಧಾ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ‘ತುಂಬ ಹೆಮ್ಮೆ ಎನಿಸುತ್ತಿದೆ. ಕಲಾವಿದೆಯಾಗಿ ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರಬಹುದು. ಆದರೆ ಮಹಿಳಾ ವಿಶ್ವವಿದ್ಯಾಲಯ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು ನನ್ನ ಗುರು-ಹಿರಿಯರ ಆಶೀರ್ವಾದ ಅಂತ ಭಾವಿಸುತ್ತೇನೆ. ಕಳೆದ ಜನ್ಮದಲ್ಲಿ ನಾನು ಉತ್ತರ ಕರ್ನಾಟಕದವಳೇ ಆಗಿರಬೇಕು. ಮೊದಲು ಎಂಎಲ್​ಸಿ ಆಗಿ ಪ್ರಮಾಣವಚನ ಸ್ವೀಕರಿಸಿದ್ದು ಇಲ್ಲೇ. ನನ್ನ ಮಗ ಹೊಟ್ಟೆಯಲ್ಲಿ ಇದ್ದಾನೆ ಅಂತ ಗೊತ್ತಾಗಿದ್ದು ಇಲ್ಲಿಗೆ ಶೂಟಿಂಗ್​ ಬಂದಾಗ. ಹಲವು ಸಿನಿಮಾಗಳ ಶೂಟಿಂಗ್ ಇಲ್ಲಿ ಮಾಡಿದ್ದೇನೆ. ಅದೆಲ್ಲ ಒಳ್ಳೆಯ ನೆನಪುಗಳು’ ಎಂದು ತಾರಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More