ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಭುವನ್ ಪೊನ್ನಣ್ಣ ಅವರ ಹೊಸ ಸಿನಿಮಾಗೆ ‘ಬುಲ್ಲಿ’ ಎಂದು ಶೀರ್ಷಿಕೆ ಇಡಲಾಗಿದೆ. ಬಹುಭಾಷಾ ತಾರೆ ಊರ್ವಶಿ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಊರ್ವಶಿ ಅವರ ಪುತ್ರಿ ತೇಜ ಊರ್ವಶಿ ನಾಯರ್ ಅವರು ಈ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.
ನಟ ಭುವನ್ ಪೊನ್ನಣ್ಣ (Bhuvan Ponnanna) ಅವರ ಹೊಸ ಸಿನಿಮಾಗೆ ‘ಬುಲ್ಲಿ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾಗೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ. ಬಹುಭಾಷಾ ತಾರೆ, ಹಿರಿಯ ನಟಿ ಊರ್ವಶಿ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಊರ್ವಶಿ ಅವರ ಪುತ್ರಿ ತೇಜ ಊರ್ವಶಿ ನಾಯರ್ ಅವರು ಈ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅನೂಪ್ ಆಂಟೋನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಯಿತು. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನೋಡಿ ಊರ್ವಶಿ ಅವರು ಅಚ್ಚರಿಗೊಂಡರು. ಹಲವು ವರ್ಷಗಳ ಬಳಿಕ ಊರ್ವಶಿ ಅವರು ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ ಎಂಬುದು ವಿಶೇಷ. ‘ರಾಮ ಶಾಮ ಭಾಮ’ ಬಳಿಕ ಕನ್ನಡ ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡುತ್ತಿರುವುದಕ್ಕೆ ಅವರಿಗೆ ಖುಷಿ ಇದೆ. ಈ ಬಗ್ಗೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

