Vaishnavi Gowda: ಅಭಿಮಾನಿಗಳೊಂದಿಗೆ ಮನಬಿಚ್ಚಿ ಮಾತನಾಡಿದ ನಟಿ ವೈಷ್ಣವಿ ಗೌಡ       

| Updated By: ಗಂಗಾಧರ​ ಬ. ಸಾಬೋಜಿ

Updated on: Nov 28, 2022 | 8:19 PM

'ಪುನೀತೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಮಾನಿಗಳೊಂದಿಗೆ ಮನಬಿಚ್ಚಿ ಮಾತನಾಡಿದ ನಟಿ ವೈಷ್ಣವಿ ಗೌಡ

‘ಬಿಗ್​ ಬಾಸ್​’ ಮಾಜಿ ಸ್ಪರ್ಧಿ ಹಾಗೂ ‘ಅಗ್ನಿಸಾಕ್ಷಿ’ ಧಾರಾವಾಹಿಯ ಖ್ಯಾತಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರು ಇತ್ತೀಚೆಗೆ ತಮ್ಮ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಸದ್ಯ ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಪುನೀತೋತ್ಸವ’ ಕಾರ್ಯಕ್ರಮದ ಅಂತಿಮ ದಿನವಾದ ಇಂದು ನಟಿ ವೈಷ್ಣವಿ ಗೌಡ ಭಾಗವಹಿಸಿದ್ದರು. ಇದೇ ವೇಳೆ ತಮ್ಮ ಅಭಿಮಾನಿಗಳೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ. ‘ಪುನೀತ್​ ಸರ್ ಎಂದಿಗೂ ನಮ್ಮ ಮನದಲ್ಲಿರುತ್ತಾರೆ. ನಮ್ಮ ಜೊತೆಗೆ ಇರುತ್ತಾರೆ. ಪ್ರತಿಯೊಬ್ಬ ಕಲಾವಿದರಿಗೆ ನೀವು ಇಷ್ಟು ಪ್ರೋತ್ಸಾಹ ನೀಡುತ್ತಿದ್ದೀರಿ’ ಎಂದು ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 28, 2022 08:18 PM