ಅದಮ್ಯ ಚೇತನದ ತೇಜಸ್ವಿನಿ ಅನಂತಕುಮಾರ್​ಗೆ ಟಿವಿ9 ಹೆಮ್ಮೆಯ ಕನ್ನಡತಿ ಗೌರವ

|

Updated on: Feb 22, 2025 | 9:22 PM

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆಯಾಗಿರುವ ತೇಜಸ್ವಿನಿ ಅನಂತಕುಮಾರ್ ಅವರಿಗೆ ಈ ವರ್ಷದ ಟಿವಿ9 ಹೆಮ್ಮೆಯ ಕನ್ನಡತಿ ಪ್ರಶಸ್ತಿ ಸಿಕ್ಕಿದೆ. ವಿವಿಧ ಕ್ಷೇತ್ರಗಳ 9 ಸಾಧಕರಿಗೆ ಈ ಗೌರವ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಟಿವಿ9 ನೆಟ್​ವರ್ಕ್ ಸಿಇಒ ಬರುಣ್ ದಾಸ್ ತೇಜಸ್ವಿನಿ ಅನಂತಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆಯಾಗಿರುವ ತೇಜಸ್ವಿನಿ ಅನಂತಕುಮಾರ್ ಅವರಿಗೆ ಈ ವರ್ಷದ ಟಿವಿ9 ಹೆಮ್ಮೆಯ ಕನ್ನಡತಿ ಪ್ರಶಸ್ತಿ ಸಿಕ್ಕಿದೆ. ವಿವಿಧ ಕ್ಷೇತ್ರಗಳ 9 ಸಾಧಕರಿಗೆ ಈ ಗೌರವ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಟಿವಿ9 ನೆಟ್​ವರ್ಕ್ ಸಿಇಒ ಬರುಣ್ ದಾಸ್ ತೇಜಸ್ವಿನಿ ಅನಂತಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ತೇಜಸ್ವಿನಿ ಅನಂತಕುಮಾರ್, ಅದಮ್ಯ ಚೇತನ ಸಂಸ್ಥೆಯ ಮೂಲಕ ಸಾಕಷ್ಟು ಶಾಲೆಗಳಿಗೆ, ಸಂಸ್ಥೆಗಳಿಗೆ ಉಚಿತ ಊಟ ನೀಡಲಾಗುತ್ತಿದೆ. ಪ್ಲಾಸ್ಟಿಕ್ ಲೋಟ, ಬಾಟಲಿಗಳ ಬಳಕೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದೇವೆ. ಹಸಿರು ಭಾನುವಾರದ ಮೂಲಕ ಸಾಕಷ್ಟು ಜನರಲ್ಲಿ ಪರಿಸರ ಪ್ರೇಮ ಮೂಡಿಸಿದ್ದೇವೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ