ಮೊರಾದಾಬಾದ್​ನಲ್ಲಿ ಅತ್ತಿಗೆ ಮೇಲೆ ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ಹಲ್ಲೆ

|

Updated on: Feb 19, 2025 | 6:00 PM

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮದ್ಯವ್ಯಸನಿ ವ್ಯಕ್ತಿ ಅತ್ತಿಗೆಯ ಮೇಲೆ ದೌರ್ಜನ್ಯ ನಡೆಸಿ, ಹಲ್ಲೆ ಎಸಗಿದ್ದಾನೆ. ಆತನ ವಿರುದ್ಧ ದೂರು ದಾಖಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಮುಗಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.

ಮೊರಾದಾಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನ ಮುಗಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಡಿತದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮನೆಯ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಹಾಥಿ ವಾಲಾ ಮಂದಿರ ಗೋಶಾಲಾ ಬಳಿ ವಾಸಿಸುವ ಸಚಿನ್ ಕಶ್ಯಪ್ ಕುಡಿದ ಮತ್ತಿನಲ್ಲಿ ತನ್ನ ಅಣ್ಣನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದಕ್ಕೆ ಪ್ರತಿಯಾಗಿ ಆಕೆಯೂ ಹಲ್ಲೆ ನಡೆಸಿದ್ದಾಳೆ. ಇಬ್ಬರಿಗೂ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ