ಪ್ರಧಾನಿ ಮೋದಿ ಮಂಗಳೂರು ಭೇಟಿ: ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿಗೆ ಜವಾಬ್ದಾರಿಗಳನ್ನು ವಿವರಿಸಿದರು ಎಡಿಜಿಪಿ ಅಲೋಕ್ ಕುಮಾರ
ಭದ್ರತಾ ವ್ಯವಸ್ಥೆಯ ಜವಾಬ್ದಾರಿಯನ್ನು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ವಹಿಸಿಕೊಂಡಿದ್ದಾರೆ. ಭದ್ರತೆಗೆ ನೀಯೋಜಿಸಲಾಗಿರುವ ಪೊಲೀಸ್ ಸಿಬ್ಬಂದಿಗೆ ಅವರವರ ಜವಾಬ್ದಾರಿಯನ್ನು ಅಲೋಕ್ ಕುಮಾರ ವಿವರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮಂಗಳೂರು: ನಾಳೆ ಅಂದರೆ ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮಂಗಳೂರು ನಗರಕ್ಕೆ ಆಗಮಿಸಲಿದ್ದು ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 1,200 ಕೋಟಿ ರೂ. ವೆಚ್ಚದ ಕಾಮಗಾರಿಗಳ ಲೋಕಾರ್ಪಣೆ (commission) ಮಾಡಿ ಸಾಗರ ಮಾಲಾ (Sagara Mala) ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಿಗಳ ಕಾರ್ಯಕ್ರಮ ನಡೆಯುವ ಸ್ಥಳ ಪೊಲೀಸ್ ಭದ್ರಕೋಟೆಯಾಗಿ ಮಾರ್ಪಟ್ಟಿದೆ. ಭದ್ರತಾ ವ್ಯವಸ್ಥೆಯ ಜವಾಬ್ದಾರಿಯನ್ನು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ವಹಿಸಿಕೊಂಡಿದ್ದಾರೆ. ಭದ್ರತೆಗೆ ನೀಯೋಜಿಸಲಾಗಿರುವ ಪೊಲೀಸ್ ಸಿಬ್ಬಂದಿಗೆ ಅವರವರ ಜವಾಬ್ದಾರಿಯನ್ನು ಅಲೋಕ್ ಕುಮಾರ ವಿವರಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.