ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ

Edited By:

Updated on: Apr 17, 2026 | 3:53 PM

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದ ಅವರು, ಕೈದಿಗಳೊಂದಿಗೆ ನೇರವಾಗಿ ಮಾತನಾಡಿದ್ದಾರೆ. ಜೈಲುಗಳಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ.

ಬಾಗಲಕೋಟೆ, ಏಪ್ರಿಲ್​​ 17: ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದ್ದಾರೆ. ಗೌರವ ರಕ್ಷೆ ನೀಡಿ ಅವರನ್ನು ಸ್ವಾಗತಿಸಲಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ, ಕೈದಿಗಳಿಗೆ ಒದಗಿಸಲಾಗುವ ಸೌಲಭ್ಯಗಳು ಮತ್ತು ಸ್ವಚ್ಛತಾ ಕ್ರಮಗಳ ಕುರಿತು ಅಲೋಕ್ ಕುಮಾರ್ ಈ ವೇಳೆ ಕೂಲಂಕುಷ ಪರಿಶೀಲನೆ ನಡೆಸಿದ್ದಾರೆ. ಕೈದಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಅವರು, ಅಹವಾಲುಗಳನ್ನು ಆಲಿಸಿದ್ದಾರೆ. ಅಲ್ಲದೆ, ಕಾರಾಗೃಹದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶಿಸ್ತುಬದ್ಧವಾಗಿ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More