ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ

Updated By: Ganapathi Sharma

Updated on: May 02, 2025 | 9:08 AM

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು. ಜನರು ಶಾಂತಿ ಕಾಪಾಡಬೇಕು. ಮಂಗಳೂರಿನ ಹಿನ್ನೆಲೆ ಗಮನಿಸಿದರೆ ಈ ಘಟನೆ ಹಿಂದೆ ಬೇರೇನೂ ಅಸ್ವಾಭಾವಿಕತೆ ಕಾಣುತ್ತಿಲ್ಲ ಎಂದು ಎಡಿಜಿಪಿ ಹಿತೇಂದ್ರ ತಿಳಿಸಿದರು. ಅವರ ಮಾತಿನ ವಿಡಿಯೋ ಇಲ್ಲಿದೆ.

ಮಂಗಳೂರು, ಮೇ 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೇಳುವ ಸುಳಿವಿನ ಹಿನ್ನೆಲೆಯಲ್ಲಿ ಎಡಿಜಿಪಿ ಹಿತೇಂದ್ರ ನಗರಕ್ಕೆ ಭೇಟಿ ನೀಡಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shettyಹತ್ಯೆ ಪ್ರಕರಣ ಸಂಬಂಧ ಮಾತನಾಡಿದ್ದಾರೆ. ಘಟನೆ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ. ಅವರು ಇನ್ನೂ ಏನೇನೆಂದರು ಎಂಬುದನ್ನು ತಿಳಿಯಲು ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ