ಕರ್ನಾಟಕದಲ್ಲೂ I Love ಮೊಹಮ್ಮದ್ ಅಬ್ಬರ: ಖಡಕ್ ಎಚ್ಚರಿಕೆ ನೀಡಿದ ಎಡಿಜಿಪಿ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊತ್ತಿಕೊಂಡ 'ಐ ಲವ್ ಮುಹಮ್ಮದ್' ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್ ಘೋಷಣೆ ಮೊಳಗಿದೆ. ಬೆಳಗಾವಿ, ದಾವಣಗೆರೆ, ಆಳಂದ ಸೇರಿ 4 ಕಡೆ ಘಟನೆ ನಡೆದಿದ್ದು, ಘಟನೆ ಸಂಬಂಧ ಈಗಾಗಲೇ ಎರಡು FIR ದಾಖಲಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯಿಸಿದ್ದು, ಖಡಕ್ ಸಂದೇಶ ರವಾನಿಸಿದ್ದಾರೆ
ಬೆಂಗಳೂರು, (ಅಕ್ಟೋಬರ್ 06): ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊತ್ತಿಕೊಂಡ ‘ಐ ಲವ್ ಮುಹಮ್ಮದ್’ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್ ಘೋಷಣೆ ಮೊಳಗಿದೆ. ಬೆಳಗಾವಿ, ದಾವಣಗೆರೆ, ಆಳಂದ ಸೇರಿ 4 ಕಡೆ ಘಟನೆ ನಡೆದಿದ್ದು, ಘಟನೆ ಸಂಬಂಧ ಈಗಾಗಲೇ ಎರಡು FIR ದಾಖಲಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯದ 4 ಕಡೆ ಲವ್ ಯೂ ಮೊಹಮ್ಮದ್ ಘೋಷಣೆ ಪ್ರಕರಣಗಳು ದಾಖಲಾಗಿವೆ. ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಸಮರ್ಪಕವಾಗಿದೆ. ಅಹಿತಕರ ಘಟನೆಗಳಿಗೆ ಇಲಾಖೆ ಅವಕಾಶ ನೀಡುವುದಿಲ್ಲ.ಕಾನೂನು ಸುವ್ಯವಸ್ಥೆ ಧಕ್ಕೆ ತರಲು ಯತ್ನಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
Latest Videos

