ಅಂಜಲಿ ಸಾವಿಗೆ ನ್ಯಾಯ ಕೊಡಿಸಿ: ಎಡಿಜಿಪಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಅಜ್ಜಿ

ಅಂಜಲಿ ಸಾವಿಗೆ ನ್ಯಾಯ ಕೊಡಿಸಿ: ಎಡಿಜಿಪಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಅಜ್ಜಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ

Updated on:May 19, 2024 | 10:07 PM

ಹುಬ್ಬಳ್ಳಿಯ ವೀರಾಪುರ ಬಡಾವಣೆಯಲ್ಲಿರುವ ಅಂಜಲಿ ನಿವಾಸಕ್ಕೆ ಇಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ ಭೇಟಿ ನೀಡಿದರು. ಈ ವೇಳೆ ಅಂಜಲಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಅಜ್ಜಿ ಗಂಗಮ್ಮ ಹಾಗೂ ಸಹೋದರಿಯರು ಮನವಿ ಮಾಡಿದ್ದು, ಆರ್‌.ಹಿತೇಂದ್ರ ಕಾಲಿಗೆ ಬಿದ್ದು ಪೋಷಕರು ಕಣ್ಣೀರು ಹಾಕಿದ್ದಾರೆ. ಆರೋಪಿ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಎಂದಿದ್ದಾರೆ.

ಹುಬ್ಬಳ್ಳಿ, ಮೇ 19: ನಗರದಲ್ಲಿ ನೇಹಾ ಮತ್ತು ಅಂಜಲಿ ಅಂಬಿಗೇರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಗೆ ಆಗಮಿಸಿದ್ದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌.ಹಿತೇಂದ್ರ (adgp r hitendra) ಸಭೆ ಮಾಡಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ವೀರಾಪುರ ಬಡಾವಣೆಯಲ್ಲಿರುವ ಅಂಜಲಿ (Anjali) ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅಂಜಲಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಅಜ್ಜಿ ಗಂಗಮ್ಮ ಹಾಗೂ ಸಹೋದರಿಯರು ಮನವಿ ಮಾಡಿದ್ದು, ಆರ್‌.ಹಿತೇಂದ್ರ ಕಾಲಿಗೆ ಬಿದ್ದು ಪೋಷಕರು ಕಣ್ಣೀರು ಹಾಕಿದ್ದಾರೆ. ಆರೋಪಿ ಗಿರೀಶ್‌ಗೆ ಗಲ್ಲು ಶಿಕ್ಷೆಯಾಗಬೇಕು ಅಂತಾ ಅಜ್ಜಿ ಮನವಿ ಮಾಡಿದ್ದಾರೆ. ಜೊತೆಗೆ ಸರ್ಕಾರದಿಂದ ನಮಗೆ ಪರಿಹಾರ ಕೊಡಿಸಿ ಮತ್ತು ಸೂಕ್ತವಾದ ಭದ್ರತೆ ನೀಡಿ ಎಂದು ಹೇಳಿದ್ದಾರೆ. ಈ ವೇಳೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರನ್‌, ಧಾರವಾಡ ಎಸ್‌ಪಿ ಡಾ.ಗೋಪಾಲಕೃಷ್ಣ, ಹುಬ್ಬಳ್ಳಿ ಡಿಸಿಪಿ ರವೀಶ್ ಸಾಥ್‌ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 19, 2024 10:06 PM