UPSC toppers felicitated: ರಾಜ್ಯದ ಯುಪಿಎಸ್ ಸಿ ಟಾಪರ್ ಗಳಿಗೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಸನ್ಮಾನ  

|

Updated on: Jun 10, 2023 | 1:24 PM

ಸಮಾರಂಭದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ್ ಕಂಬಾರ್, ಸಚಿವ ಚಲುನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಇನ್ನಿತರ ಗಣ್ಯರು ಹಾಜರಿದ್ದರು.

ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗ (UPSC) 2022 ರ ಸಾಲಿಗೆ ನಡೆದ ಐಎಎಸ್, ಐಪಿಎಸ್, ಐಆರ್ ಎಸ್ ಮತ್ತು ಐಎಫ್ ಎಸ್ ನಾಗರಿಕ ಸೇವೆಗಳಿಗೆ (civil services) ಪರೀಕ್ಷೆಯಲ್ಲಿ ಅರ್ಹತೆ ಗಿಟ್ಟಿಸಿದ ರಾಜ್ಯದ ಪ್ರತಿಭಾವಂತರಿಗೆ ಇಂದು ಮತ್ತೊಮ್ಮೆ ಹೆಮ್ಮೆಯ ಸಂದರ್ಭ. ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ವತಿಯಿಂದ ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಬಿಜಿಎಸ್ ಸಿಟಿಯಲ್ಲಿ ಅವರನ್ನು ಸತ್ಕರಿಸಲಾಯಿತು. ಮಠದ ಶೀಗಳು ನಿರ್ಮಲಾನಂದನಾಥ ಮಹಾ ಸ್ವಾಮೀಜಿ (Nirmalanandanatha Maha Swamiji) ಮತ್ತು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಾಗರಿಕ ಸೇವೆಗಳಿಗೆ ಆಯ್ಕೆಯಾದವರನ್ನು ಮತ್ತು ಅವರ ತಂದೆತಾಯಿಗಳನ್ನು ಅಭಿನಂದಿಸಿ ಗೌರವಿಸಿದರು. ಸಮಾರಂಭದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ್ ಕಂಬಾರ್, ಸಚಿವ ಚಲುನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಇನ್ನಿತರ ಗಣ್ಯರು ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ