ದೇವಸ್ಥಾನದಲ್ಲೇ ಕೃತಿ ಸನೋನ್​ಗೆ ಕಿಸ್ ಮಾಡಿದ ನಿರ್ದೇಶಕ; ವ್ಯಕ್ತವಾಯಿತು ಟೀಕೆ

Updated on: Jun 07, 2023 | 12:37 PM

ನಿರ್ದೇಶಕ ಓಂ ರಾವತ್ ಹಾಗೂ ನಟಿ ಕೃತಿ ಸನೋನ್ ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಿಂದ ಮರಳುವಾಗ ಇಬ್ಬರೂ ಕಿಸ್ ಮಾಡಿಕೊಂಡಿದ್ದಾರೆ.

ನಿರ್ದೇಶಕ ಓಂ ರಾವತ್ ಅವರ ನಿರ್ದೇಶನದ ‘ಆದಿಪುರುಷ್’ ಸಿನಿಮಾ (Adipurush Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ನಿರ್ದೇಶಕ ಓಂ ರಾವತ್ ಹಾಗೂ ಸೀತೆ ಪಾತ್ರ ಮಾಡಿದ ನಟಿ ಕೃತಿ ಸನೋನ್ (Kriti Sanon)​ ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಿಂದ ಮರಳುವಾಗ ಇಬ್ಬರೂ ಕಿಸ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಟೀಕೆ ಮಾಡಿದ್ದಾರೆ. ದೇವಸ್ಥಾನದಲ್ಲಿ ಈ ರೀತಿಯ ನಡುವಳಿಕೆ ತಪ್ಪು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಹಗ್ ಮಾಡಿಕೊಳ್ಳೋದು, ಸ್ನೇಹ ಪೂರ್ವಕವಾಗಿ ಕಿಸ್ ಮಾಡಿಕೊಳ್ಳೋದು ಸೆಲೆಬ್ರಿಟಿಗಳಿಗೆ ಹೊಸದಲ್ಲ. ಹೀಗಾಗಿ, ಈ ರೀತಿಯ ಟ್ರೋಲ್​ಗಳಿಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 07, 2023 12:36 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More