ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ದಾವಣಗೆರೆಯ ರೇಣುಕಾ ಮಂದಿರದಲ್ಲಿ ಪೊಲೀಸ್ ಇಲಾಖೆಯಿಂದ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ ಕಾರ್ಯಕ್ರಮ ಆಯೋಜಿಸಲಾಯಿತು. ನಟಿ ಅದಿತಿ ಪ್ರಭುದೇವ ಅವರು ಇದರಲ್ಲಿ ಭಾಗಿ ಆಗಿದ್ದಾರೆ. ಮಾದಕ ದ್ರವ್ಯದ ಪರಿಣಾಮದ ಬಗ್ಗೆ ಅತ್ಯುತ್ತಮವಾಗಿ ಮಾತನಾಡಿದ 8ನೇ ತರಗತಿ ವಿದ್ಯಾರ್ಥಿನಿಗೆ ಅದಿತಿ ಪ್ರಭುದೇವ ಅವರು ಹತ್ತು ಸಾವಿರ ರೂ. ಬಹುಮಾನ ನೀಡಿದರು.
ದಾವಣಗೆರೆ: ನಗರದ ರೇಣುಕಾ ಮಂದಿರದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಭಾಗಿ ಆಗಿದ್ದಾರೆ. ಮಾದಕ ದ್ರವ್ಯದ ಪರಿಣಾಮದ ಬಗ್ಗೆ ಅದ್ಭುತವಾಗಿ ಮಾತನಾಡಿದ 8ನೇ ತರಗತಿ ವಿದ್ಯಾರ್ಥಿನಿಗೆ ಅದಿತಿ ಅವರು 10 ಸಾವಿರ ರೂಪಾಯಿ ಬಹುಮಾನ ನೀಡಿದ್ದಾರೆ. ಕೈಗೆ ಹಣ ಬರುತ್ತಿದ್ದಂತೆಯೇ ವಿದ್ಯಾರ್ಥಿನಿ ಭಾವುಕಳಾಗಿ ಕಣ್ಣೀರಿಟ್ಟಳು. ಆಕೆಯನ್ನು ಅದಿತಿ ಪ್ರಭುದೇವ ಸಂತೈಸಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos