Aditi Prabhudeva: ‘ಛೂ ಮಂತರ್’ ಹಾರರ್ ಸಿನಿಮಾ ಹೊಸ ಲೋಕಕ್ಕೆ ಕರೆದುಕೊಂಡು ಹೋಗತ್ತೆ: ಅದಿತಿ ಪ್ರಭುದೇವ
Choo Mantar | Kannada Movie: ‘ಛೂ ಮಂತರ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಅದಿತಿ ಪ್ರಭುದೇವ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಆ ಮೂಲಕ ನಿರೀಕ್ಷೆ ಹುಟ್ಟುಹಾಕಿದ್ದಾರೆ.
ನಟ ಶರಣ್ ಅಭಿನಯದ ‘ಛೂ ಮಂತರ್’ (Choo Mantar) ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ. ಹಾರರ್ ಕಥಾಹಂದರ ಇರುವ ಈ ಚಿತ್ರಕ್ಕೆ ನವನೀತ್ ನಿರ್ದೇಶನ ಮಾಡಿದ್ದು, ತರುಣ್ ಶಿವಪ್ಪ ಬಂಡವಾಳ ಹೂಡಿದ್ದಾರೆ. ಶರಣ್ (Sharan) ಜೊತೆಗೆ ಅದಿತಿ ಪ್ರಭುದೇವ, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಪ್ರಭು ಮುಂಡ್ಕೂರ್ ಮುಂತಾದವರು ನಟಿಸಿದ್ದಾರೆ. ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಅದಿತಿ ಪ್ರಭುದೇವ (Aditi Prabhudeva) ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ಈ ಸಿನಿಮಾ ನಿಮ್ಮನ್ನು ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ’ ಎಂದು ಅವರು ಹೇಳಿದ್ದಾರೆ. ಆ ಮೂಲಕ ನಿರೀಕ್ಷೆ ಹುಟ್ಟುಹಾಕಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jan 03, 2023 10:40 PM