Aditya L1 Mission Launch Live: ಆದಿತ್ಯ L-1 ಉಡಾವಣೆ ಲೈವ್ ವೀಕ್ಷಿಸಿ
ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ಸೂರ್ಯಯಾನಕ್ಕೆ ಸಜ್ಜಾಗಿದೆ. ಸೆಪ್ಟೆಂಬರ್ 2ರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಆದಿತ್ಯ ಎಲ್ 1 ಉಡಾವಣೆಯಾಗಲಿದೆ. ಇಸ್ರೋ ಆದಿತ್ಯ ಎಲ್-1 ನೌಕೆಯನ್ನ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ದೂರದ ಲಾಂಗ್ರೇಜ್ ಪಾಯಿಂಟ್‌ಗೆ ತಲುಪಿ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ. ಆದಿತ್ಯ L-1 ಉಡಾವಣೆ ಡಿಜಿಟಲ್ ಲೈವ್ ವೀಕ್ಷಿಸಿ.
ಕಳೆದ ವಾರ ಅಂದ್ರೆ ಅಗಸ್ಟ್ 23 ರಂದು ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಜಗತ್ತಿನ ಗಮನವನ್ನು ತನ್ನತ್ತ ಸೆಳೆದಿತ್ತು. ಚಂದ್ರಯಾನ-3ರ ಯಶಸ್ಸಿನ ಬಳಿಕ ಈಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಆದಿತ್ಯ ಎಲ್-1 ನೌಕೆಯನ್ನು ಇಸ್ರೋ ಉಡಾವಣೆ ಮಾಡಲಿದೆ. ಆದಿತ್ಯ ಎಲ್-1 ನೌಕೆ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದೆ. ಆದಿತ್ಯ L-1’ ಉಡ್ಡಯನಕ್ಕೆ ಸಕಲ ಸಿದ್ಧತೆ ನಡೆದಿದ್ದು Live ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos