ಜೆಡಿಎಸ್​​ ಶಾಸಕ ಎಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದ್ದೇಗೆ? ವಕೀಲ ಹೇಳಿದ್ದಿಷ್ಟು

Updated on: May 13, 2024 | 7:48 PM

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹಾಗಾದ್ರೆ, ಜಾಮೀನು ಯಾವ ಗ್ರೌಂಡ್ಸ್​ ಮೇಲೆ ಸಿಕ್ತು? ಈ ಬಗ್ಗೆ ರೇವಣ್ಣ ಪರ ವಾದ ಮಂಡಿಸಿದ ವಕೀಲರು ಹೇಳಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರು, (ಮೇ 13): ಸಂತ್ರಸ್ತೆ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ(HD Revanna)  ಅವರಿಗೆ ಜಾಮೀನು ಸಿಕ್ಕಿದೆ. ಇಂದು (ಮೇ 13) ಜನಪ್ರತಿನಿಧಿಗಳ ನ್ಯಾಯಾಲದಲ್ಲಿ ನಡೆದ ಜಾಮೀರ್ನು ಅರ್ಜಿ ವಿಚಾರಣೆ ನಡೆದಿದ್ದು, ಎಸ್ಐಟಿ ಪರ SPPಗಳಾದ ಜಯ್ನಾ ಕೋಠಾರಿ & ಅಶೋಕ್ ನಾಯ್ಕ್ ಹಾಜರಿದ್ರೆ, ರೇವಣ್ಣ ಪರ ಸಿ.ವಿ.ನಾಗೇಶ್ ಅವರು ವಾದ ಮಂಡಿಸಿದರು. ಈ ವಾರ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ರೇವಣ್ಣಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನು ಜಾಮೀನು ಮಂಜೂರಾದ ಬಳಿಕ ರೇವಣ್ಣ ಪರ ವಕೀಲರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More