ಮಾಡಾಳ್ ವಿರೂಪಾಕ್ಷಪ್ಪನವರಿಗೆ ಒಂದೇ ದಿನದಲ್ಲಿ ಜಾಮೀನು ಸಿಕ್ಕಿದ್ದನ್ನು ಉಲ್ಲೇಖಿಸಿ ಪತ್ರದ ಮೂಲಕ ಸಿಜೆಐಗೆ ಗಮನಕ್ಕೆ ತಂದ ವಕೀಲ ವಿವೇಕ್ ಸುಬ್ಬಾರೆಡ್ಡಿ
ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿಯವರು ಕೋರ್ಟಿನ ಕ್ರಮವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ.
ಬೆಂಗಳೂರು: ಭ್ರಷ್ಟಾಚಾರದ ಆರೋಪಕ್ಕೆ ಸಿಕ್ಕಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ (Madal Virupakshappa) ಕೇವಲ ಒಂದು ದಿನದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿರುವುದು ರಾಜ್ಯದ ಜನತೆಯಲ್ಲಿ ಅಚ್ಚರಿ ಮೂಡಿಸಿದೆ ಮತ್ತು ಭಾರೀ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿಯವರು ಕೋರ್ಟಿನ ಕ್ರಮವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯವರಿಗೆ (Chief Justice Of India) ಮನವಿಯೊಂದನ್ನು ಸಲ್ಲಿಸಿದ್ದಾರೆ. ಟಿವಿ9 ಬೆಂಗಳೂರು ವರದಿಗಾರ ವಿವೇಕ್ ಅವರೊಂದಿಗೆ ಮಾತಾಡಿದ್ದಾರೆ. ಅವರು ಎತ್ತಿರುವ ಪ್ರಶ್ನೆ ಮತ್ತು ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಲು ಉಂಟಾದ ಅನಿವಾರ್ಯತೆ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 08, 2023 04:59 PM