Aero india 2025: ಬೆಂಗಳೂರಿನಲ್ಲಿ ರಾಜನಾಥ್ ಸಿಂಗ್ ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರಿನಲ್ಲಿ ಫೆಬ್ರುವರಿ 10 ರಿಂದ ಏರೋ ಇಂಡಿಯಾ ಏರ್ ಶೋ ಆರಂಭವಾಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಫೆಬ್ರುವರಿ 9 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಿದ್ದರು. ಈ ಏರ್ ಶೋ ಭಾರತೀಯ ರಕ್ಷಣಾ ಉದ್ಯಮಕ್ಕೆ ಪ್ರಮುಖ ವೇದಿಕೆಯಾಗಿದೆ.
ಬೆಂಗಳೂರಿನಲ್ಲಿ ಸೋಮವಾರ (ಫೆ.10) ರಿಂದ ಏರೋ ಇಂಡಿಯಾ ಏರ್ ಶೋ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಬೆಳಗ್ಗೆ 9 ಗಂಟೆಗೆ ಏರ್ ಶೋ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ರಾಜನಾಥ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇಂದು (ಫೆ.09) ಬೆಂಗಳೂರಿನ ತಾಜ್ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜ್ಯ ಸರ್ಕಾರದ ಪರವಾಗಿ ಸುದ್ದಿಗೋಷ್ಠಿಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗಿಯಾಗಿದ್ದಾರೆ.
Published on: Feb 09, 2025 05:29 PM
Latest Videos

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್ನಲ್ಲಿ ಸಂಭ್ರಮಾಚರಣೆ

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ

ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು

ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
