ಬೆಂಗಳೂರು ಏರ್ ಶೋ: ಬೆಂಗಳೂರು-ಹೈದರಾಬಾದ್, ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್ ಶೋ ನಡೆಯುತ್ತಿದೆ. ಏರ್ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್ ಜಾಮ್ನಿಂದ ಪರದಾಡಿದರು.
ಬೆಂಗಳೂರಿನ ಯಲಹಂಕ ವಾಯುಸೇನಾ ನೆಲೆಯಲ್ಲಿ ಏರೋ ಇಂಡಿಯಾ-2025 ಏರ್ ಶೋ ನಡೆಯುತ್ತಿದೆ. ಏರ್ಶೋಗೆ ತೆರಳುವ ವಾಹನಗಳನ್ನು ತಪಾಸಣೆಗೆ ಒಳಪಡಿಸಿ ಪ್ರವೇಶಕ್ಕೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಿಮೀಗಟ್ಟಲೇ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಇದರಿಂದ ವಿಮಾನ ನಿಲ್ದಾಣದ ಕಡೆ ಹೋಗುವ ವಾಹನ ಸವಾರರು ಟ್ರಾಫಿಕ್ ಜಾಮ್ನಿಂದ ಪರದಾಡಿದರು. ಬಿಎಸ್ಎಫ್ ಟ್ರೈನಿಂಗ್ಸೆಂಟರ್ನಿಂದ ಯಲಹಂಕಾ ಏರ್ ಪೋರ್ಸ್ವರೆಗೂ ಟ್ರಾಫಿಕ್ ಜಾಮ್ ಆಗಿದೆ. ಬೆಂಗಳೂರು-ಹೈದರಾಬಾದ್ ರಸ್ತೆಯಲ್ಲಿ ಸುಮಾರು 6 ಕಿ.ಮೀ. ಟ್ರಾಫಿಕ್ ಜಾಮ್ ಆಗಿದೆ. ಬಾಗಲೂರು ಕ್ರಾಸ್ ಫ್ಲೈಓವರ್, ಸರ್ವೀಸ್ ರಸ್ತೆಯಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ.