ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಭಾರತಕ್ಕೆ ಬಂದಿಳಿದ ನ್ಯೂಜಿಲೆಂಡ್ ತಂಡ

AFG vs NZ: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ನ್ಯೂಜಿಲೆಂಡ್ ತಂಡ ಭಾರತಕ್ಕೆ ಆಗಮಿಸಿದೆ. ಅಫ್ಘಾನಿಸ್ತಾನ, ಕಿವೀ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿದೆ. ಇದೀಗ ಉಭಯ ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 9 ರಿಂದ ಗ್ರೇಟರ್ ನೋಯ್ಡಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.

Follow us
ಪೃಥ್ವಿಶಂಕರ
|

Updated on:Sep 05, 2024 | 9:26 PM

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ನ್ಯೂಜಿಲೆಂಡ್ ತಂಡ ಭಾರತಕ್ಕೆ ಆಗಮಿಸಿದೆ. ಅಫ್ಘಾನಿಸ್ತಾನ, ಕಿವೀ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿದೆ. ಇದೀಗ ಉಭಯ ತಂಡಗಳು ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 9 ರಿಂದ ಗ್ರೇಟರ್ ನೋಯ್ಡಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಇದು ಅಫ್ಘಾನಿಸ್ತಾನ ತಂಡದ ದತ್ತು ತವರು ಮೈದಾನವೂ ಆಗಿದ್ದು, ಉಭಯ ತಂಡಗಳ ನಡುವಿನ ಏಕೈಕ ಟೆಸ್ಟ್ ಪಂದ್ಯಕ್ಕೆ ಇದು ಆತಿಥ್ಯ ವಹಿಸಲಿದೆ. ಈ ಪಂದ್ಯಕ್ಕಾಗಿ ರಚಿನ್ ರವೀಂದ್ರ ಮತ್ತು ಬೆನ್ ಸಿಯರ್ಸ್ ಅವರಂತಹ ಆಟಗಾರರು ಈಗಾಗಲೇ ಭಾರತದಲ್ಲಿದ್ದು, ಸೂಪರ್ ಕಿಂಗ್ಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ರಶೀದ್ ಖಾನ್ ಆಡುವುದಿಲ್ಲ

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಟೆಸ್ಟ್ ಮಾದರಿಯಿಂದ ದೀರ್ಘ ರಜೆ ತೆಗೆದುಕೊಂಡಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮೂಲವೊಂದು ರಶೀದ್ ಮತ್ತು ತಂಡದ ಮ್ಯಾನೇಜ್‌ಮೆಂಟ್ ಅವರ ಬೆನ್ನಿನ ಸಮಸ್ಯೆಯ ದೃಷ್ಟಿಯಿಂದ ದೀರ್ಘ ಸ್ವರೂಪದ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ಪರಸ್ಪರ ನಿರ್ಧರಿಸಿದ್ದಾರೆ ಎಂದು ಹೇಳಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ನಂತರ ರಶೀದ್ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ನಂತರ ನಾಲ್ಕು ತಿಂಗಳ ಕಾಲ ಆಟದಿಂದ ಹೊರಗುಳಿದಿದ್ದರು.

ಮುಂಬರುವ ಏಕದಿನ ಟೆಸ್ಟ್‌ಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) 20 ಸದಸ್ಯರ ಪ್ರಾಥಮಿಕ ತಂಡವನ್ನು ಪ್ರಕಟಿಸಿದೆ. ತಂಡವು ಆಗಸ್ಟ್ 28 ರಂದು ಗ್ರೇಟರ್ ನೋಯ್ಡಾಕ್ಕೆ ಆಗಮಿಸಿದಾಗಿನಿಂದ ಭಾರತದಲ್ಲಿ ತರಬೇತಿ ಪಡೆಯುತ್ತಿದೆ. ಆಟಗಾರರ ಪ್ರದರ್ಶನವನ್ನು ಮೌಲ್ಯಮಾಪನ ಮಾಡಿದ ನಂತರ ಮಂಡಳಿಯು ಏಕೈಕ ಟೆಸ್ಟ್ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಆಯ್ಕೆ ಮಾಡುತ್ತದೆ. ಇದಾದ ಬಳಿಕ ನ್ಯೂಜಿಲೆಂಡ್ ತಂಡ ಭಾರತ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದು ಅಕ್ಟೋಬರ್ 16 ರಂದು ಪ್ರಾರಂಭವಾಗುತ್ತದೆ. ಇದಾದ ಬಳಿಕ ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗಾಗಿ ನ್ಯೂಜಿಲೆಂಡ್ ಶ್ರೀಲಂಕಾಕ್ಕೆ ತೆರಳಲಿದೆ.

ನ್ಯೂಜಿಲೆಂಡ್ ತಂಡ: ಟಿಮ್ ಸೌಥಿ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್ (ಉಪನಾಯಕ), ಡೇರಿಲ್ ಮಿಚೆಲ್, ವಿಲ್ ಒ’ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ಅಬ್ದುಲ್ ಮಲಿಕ್, ರಹಮತ್ ಶಾ, ಬಹೀರ್ ಶಾ ಮೆಹಬೂಬ್, ಇಕ್ರಮ್ ಅಲಿಖೇಲ್ (ವಿಕೆಟ್ ಕೀಪರ್), ಶಾಹಿದುಲ್ಲಾ ಕಮಾಲ್, ಗುಲ್ಬದಿನ್ ನೈಬ್, ಅಫ್ಸರ್ ಝಜೈಯ್ (ವಿಕೆಟ್ ಕೀಪರ್), ಉಮರ್ ಝಾಝಾಯ್ (ವಿಕೆಟ್ ಕೀಪರ್), ಜಿಯಾವುರ್ ರಹಮಾನ್ ಅಕ್ಬರ್, ಶಮ್ಸುರ್ ರೆಹಮಾನ್, ಖೈಸ್ ಅಹ್ಮದ್, ಜಹೀರ್ ಖಾನ್, ನಿಜತ್ ಮಸೂದ್, ಫರೀದ್ ಅಹ್ಮದ್ ಮಲಿಕ್, ನವೀದ್ ಜದ್ರಾನ್, ಖಲೀಲ್ ಅಹ್ಮದ್ ಮತ್ತು ಯಾಮ್ ಅರಬ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Thu, 5 September 24

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ