ಪಾಕಿಸ್ತಾನವನ್ನು ಮಕಾಡೆ ಮಲಗಿಸಿದ ಅಫ್ಘಾನಿಸ್ತಾನ್

Updated on: Sep 03, 2025 | 7:16 AM

PAK vs AFG T20: 170 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 151 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಅಫ್ಘಾನಿಸ್ತಾನ್ ತಂಡ ಪಾಕ್ ವಿರುದ್ಧ 18 ರನ್ ಗಳ ಜಯ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಇಬ್ರಾಹಿಂ ಝದ್ರಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಶಾರ್ಜಾದ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಯುವ ಆರಂಭಿಕ ದಾಂಡಿಗ ಸೆದಿಖುಲ್ಲಾ ಅಟಲ್ 45 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ 64 ರನ್ ಬಾರಿಸಿದ್ದರು.

ಆ ಬಳಿಕ ಬಂದ ಇಬ್ರಾಹಿಂ ಝದ್ರಾನ್ 45 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸ್ ನೊಂದಿಗೆ 65 ರನ್ ಕಲೆಹಾಕಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಅಫ್ಘಾನಿಸ್ತಾನ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು.

170 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 151 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಅಫ್ಘಾನಿಸ್ತಾನ್ ತಂಡ ಪಾಕ್ ವಿರುದ್ಧ 18 ರನ್ ಗಳ ಜಯ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಇಬ್ರಾಹಿಂ ಝದ್ರಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.