ಅಫ್ಘಾನಿಸ್ತಾನ್ ತಂಡಕ್ಕೆ ಭರ್ಜರಿ ಜಯ
Afghanistan vs UAE, T20I Tri-Series: ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಪರ ಆರಂಭಿಕ ದಾಂಡಿಗ ಸೆದಿಖುಲ್ಲಾ ಅಟಲ್ 54 ರನ್ ಬಾರಿಸಿದರು. ಆ ಬಳಿಕ ಬಂದ ಇಬ್ರಾಹಿಂ ಝದ್ರಾನ್ 40 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ 63 ರನ್ ಕಲೆಹಾಕಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಅಫ್ಘಾನಿಸ್ತಾನ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಕಲೆಹಾಕಿತು.
ಶಾರ್ಜಾದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಮೂರನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಯುಎಇ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತ ಅಫ್ಘಾನಿಸ್ತಾನ್ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಲಾಗಿತ್ತು.
ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಪರ ಆರಂಭಿಕ ದಾಂಡಿಗ ಸೆದಿಖುಲ್ಲಾ ಅಟಲ್ 54 ರನ್ ಬಾರಿಸಿದರು. ಆ ಬಳಿಕ ಬಂದ ಇಬ್ರಾಹಿಂ ಝದ್ರಾನ್ 40 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ ಗಳೊಂದಿಗೆ 63 ರನ್ ಕಲೆಹಾಕಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಅಫ್ಘಾನಿಸ್ತಾನ್ ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಕಲೆಹಾಕಿತು.
189 ರನ್ ಗಳ ಗುರಿ ಬೆನ್ನತ್ತಿದ ಯುಎಇ ತಂಡಕ್ಕೆ ನಾಯಕ ಮುಹಮ್ಮದ್ ವಸೀಮ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಕೇವಲ 37 ಎಸೆತಗಳನ್ನು ಎದುರಿಸಿದ ವಸೀಮ್ 6 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 67 ರನ್ ಬಾರಿಸಿದರು.
ಇನ್ನು ರಾಹುಲ್ ಚೋಪ್ರಾ 35 ಎಸೆತಗಳಲ್ಲಿ ಅಜೇಯ 52 ರನ್ ಕಲೆಹಾಕಿದರು. ಇದಾಗ್ಯೂ ಉಳಿದ ಬ್ಯಾಟರ್ ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಪರಿಣಾಮ ಯುಎಇ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 150 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಅಫ್ಘಾನಿಸ್ತಾನ್ ತಂಡ 38 ರನ್ ಗಳ ಜಯ ಸಾಧಿಸಿದೆ.
