ಬಾಂಗ್ಲಾ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿದ ಅಫ್ಘಾನಿಸ್ತಾನ್
Afghanistan vs Bangladesh: ಮೂರನೇ ಪಂದ್ಯದಲ್ಲಿನ ಅಮೋಘ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡವು ಮೂರು ಮ್ಯಾಚ್ಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದಕ್ಕೂ ಮುನ್ನ ನಡೆದ ಟಿ20 ಸರಣಿಯನ್ನು ಬಾಂಗ್ಲಾದೇಶ್ ತಂಡ 3-0 ಅಂತರದಿಂದ ಗೆದ್ದುಕೊಂಡಿತ್ತು. ಇದೀಗ ಟಿ20 ಸರಣಿ ಸೋಲಿಗೆ ಅಫ್ಘಾನಿಸ್ತಾನ್ ತಂಡ ಸೇಡು ತೀರಿಸಿಕೊಂಡಿದೆ.
ಬಾಂಗ್ಲಾದೇಶ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಇಬ್ರಾಹಿಂ ಝದ್ರಾನ್ 95 ರನ್ ಬಾರಿಸಿ ಮಿಂಚಿದರು. ಇನ್ನು ಅಂತಿಮ ಹಂತದಲ್ಲಿ ಮೊಹಮ್ಮದ್ ನಬಿ ಕೇವಲ 37 ಎಸೆತಗಳಲ್ಲಿ 62 ರನ್ ಬಾರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 50 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 293 ರನ್ ಕಲೆಹಾಕಿತು.
294 ರನ್ಗಳ ಕಠಿಣ ಗುರಿ ಪಡೆದ ಬಾಂಗ್ಲಾದೇಶ್ ತಂಡವು ಯುವ ವೇಗಿ ಬಿಲಾಲ್ ಸಮಿ ಅವರ ದಾಳಿಗೆ ತತ್ತರಿಸಿದೆ. ಪರಿಣಾಮ 27.1 ಓವರ್ಗಳಲ್ಲಿ ಕೇವಲ 93 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡವು 200 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇನ್ನು ಈ ಪಂದ್ಯದಲ್ಲಿ 7.1 ಓವರ್ಗಳಲ್ಲಿ ಕೇವಲ 33 ರನ್ ನೀಡಿ 5 ವಿಕೆಟ್ ಕಬಳಿಸಿದ ಬಿಲಾಲ್ ಸಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಸರಣಿ ಗೆಲುವು:
ಮೂರನೇ ಪಂದ್ಯದಲ್ಲಿನ ಅಮೋಘ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡವು ಮೂರು ಮ್ಯಾಚ್ಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದಕ್ಕೂ ಮುನ್ನ ನಡೆದ ಟಿ20 ಸರಣಿಯನ್ನು ಬಾಂಗ್ಲಾದೇಶ್ ತಂಡ 3-0 ಅಂತರದಿಂದ ಗೆದ್ದುಕೊಂಡಿತ್ತು. ಇದೀಗ ಟಿ20 ಸರಣಿ ಸೋಲಿಗೆ ಅಫ್ಘಾನಿಸ್ತಾನ್ ತಂಡ ಸೇಡು ತೀರಿಸಿಕೊಂಡಿದೆ.
