ಬಾಂಗ್ಲಾ ಪಡೆಯನ್ನು ಬಗ್ಗು ಬಡಿದು ಸರಣಿ ಗೆದ್ದ ಅಫ್ಘಾನಿಸ್ತಾನ್

Updated on: Oct 12, 2025 | 7:21 AM

Afghanistan vs Bangladesh, 2nd ODI: ಬಾಂಗ್ಲಾದೇಶ್ ವಿರುದ್ಧ ಟಿ20 ಸರಣಿ ಸೋತಿದ್ದ ಅಫ್ಘಾನಿಸ್ತಾನ್ ತಂಡವು ಇದೀಗ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸುವ ಮೂಲಕ ಅಫ್ಘಾನಿಸ್ತಾನ್ ತಂಡ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ಬಾಂಗ್ಲಾದೇಶ್ ವಿರುದ್ಧ ಟಿ20 ಸರಣಿ ಸೋತಿದ್ದ ಅಫ್ಘಾನಿಸ್ತಾನ್ ತಂಡವು ಇದೀಗ ಏಕದಿನ ಸರಣಿಯ ಮೂಲಕ ಕಂಬ್ಯಾಕ್ ಮಾಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸುವ ಮೂಲಕ ಅಫ್ಘಾನಿಸ್ತಾನ್ ತಂಡ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ಈ ಸರಣಿಯ ಮೊದಲ ಮ್ಯಾಚ್​​ನಲ್ಲಿ ಅಫ್ಘಾನಿಸ್ತಾನ್ ತಂಡ 5 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಅಬುಧಾಬಿಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಗೆಲುವು ದಾಖಲಿಸಿದೆ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಪಡೆ 44.5 ಓವರ್​ಗಳಲ್ಲಿ 190 ರನ್​ಗಳಿಗೆ ಆಲೌಟ್ ಆಗಿತ್ತು.

ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 28.3 ಓವರ್​ಗಳಲ್ಲಿ ಕೇವಲ 109 ರನ್​​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 81 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿ ರಶೀದ್ ಖಾನ್.

ಈ ಪಂದ್ಯದಲ್ಲಿ 8.3 ಓವರ್​ಗಳನ್ನು ಎಸೆದ ರಶೀದ್ ಖಾನ್ ಕೇವಲ 17 ರನ್​ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಇನ್ನು ರಶೀದ್ ಖಾನ್​ಗೆ ಉತ್ತಮ ಸಾಥ್ ನೀಡಿದ ಅಝ್ಮತುಲ್ಲಾ ಒಮರ್​ಝಾಹಿ 7 ಓವರ್​ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.