ಮೊದಲ ಪಂದ್ಯದ ಮೊದಲ ಇನಿಂಗ್ಸ್​ನಲ್ಲೇ ದಾಖಲೆ ಬರೆದ ಅಫ್ಘಾನ್ ವೇಗಿ

Updated By: ಝಾಹಿರ್ ಯೂಸುಫ್

Updated on: Oct 22, 2025 | 10:57 AM

Zimbabwe vs Afghanistan: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 127 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಝಿಂಬಾಬ್ವೆ ತಂಡ 359 ರನ್​ಗಳನ್ನು ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ತಾನ್ ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 34 ರನ್ ಕಲೆಹಾಕಿದೆ.

ಅಫ್ಘಾನಿಸ್ತಾನ್ ತಂಡದ ಯುವ ವೇಗಿ ಝಿಯಾವುರ್ ರೆಹಮಾನ್ ಶರೀಫಿ ಚೊಚ್ಚಲ ಪಂದ್ಯದಲ್ಲೇ ಕಮಾಲ್ ಮಾಡಿದ್ದಾರೆ. ಹರಾರೆಯಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿರುವ ಝಿಯಾವುರ್ ರೆಹಮಾನ್ ಮೊದಲ ಪಂದ್ಯದಲ್ಲೇ 7 ವಿಕೆಟ್ ಉರುಳಿಸಿದ್ದಾರೆ. ಅದು ಕೂಡ ಮೊದಲ ಇನಿಂಗ್ಸ್​ನಲ್ಲಿ ಎಂಬುದು ವಿಶೇಷ.

ಈ ಪಂದ್ಯದಲ್ಲಿ 32 ಓವರ್​ಗಳನ್ನು ಎಸೆದ ಝಿಯಾವುರ್ ರೆಹಮಾನ್ 97 ರನ್ ನೀಡಿ 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನ್ ಪರ ಚೊಚ್ಚಲ ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಪಾದಾರ್ಪಣೆ ಪಂದ್ಯದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಏಷ್ಯಾದ 2ನೇ ಬೌಲರ್ ಎಂಬ ದಾಖಲೆಯನ್ನು ಸಹ ಝಿಯಾವುರ್ ರೆಹಮಾನ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 1988 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಕಬಳಿಸಿದ್ದ ಭಾರತದ ನರೇಂದ್ರ ಹೀರ್ವಾನಿ ಮೊದಲ ಸ್ಥಾನದಲ್ಲಿದ್ದಾರೆ.

ಇದೀಗ ಮೊದಲ ಮ್ಯಾಚ್​ನಲ್ಲೇ ಏಳು ವಿಕೆಟ್ ಉರುಳಿಸಿ ಝಿಯಾವುರ್ ರೆಹಮಾನ್ ಈ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 127 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಝಿಂಬಾಬ್ವೆ ತಂಡ 359 ರನ್​ಗಳನ್ನು ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಅಫ್ಘಾನಿಸ್ತಾನ್ ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 34 ರನ್ ಕಲೆಹಾಕಿದೆ.