AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸಮಗ್ರ ಪರಿಶೀಲನೆಗೆ ಆದೇಶ: ಬೌರಿಂಗ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ

ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸಮಗ್ರ ಪರಿಶೀಲನೆಗೆ ಆದೇಶ: ಬೌರಿಂಗ್ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ

ಗಣಪತಿ ಶರ್ಮಾ
|

Updated on: Apr 30, 2026 | 11:54 AM

Share

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತದಿಂದ ಏಳು ಅಮಾಯಕರ ಸಾವು ಸಂಭವಿಸಿದ ನಂತರ, ಸರ್ಕಾರ ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಒಂದು ವಾರದೊಳಗೆ ವರದಿ ನೀಡಲು ಸೂಚಿಸಿದ್ದಾರೆ. ಇಂತಹ ದುರಂತಗಳು ಸಂಭವಿಸಿದ ನಂತರವೇ ಸರ್ಕಾರ ಕ್ರಮ ಕೈಗೊಳ್ಳುವುದೇಕೆ ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರು, ಏಪ್ರಿಲ್ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತದಲ್ಲಿ ಏಳು ಅಮಾಯಕರು ಮೃತಪಟ್ಟ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಸಮಗ್ರ ಪರಿಶೀಲನೆಗೆ ಆದೇಶ ನೀಡಿದ್ದಾರೆ. ಬೌರಿಂಗ್, ವಿಕ್ಟೋರಿಯಾ, ಕೆಸಿ ಜನರಲ್ ಮತ್ತು ಸಿವಿ ರಾಮನಗರ ಆಸ್ಪತ್ರೆ ಸೇರಿದಂತೆ ಇತರೆ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಸಮಸ್ಯೆಗಳ ಕುರಿತು ಪೂರ್ವಭಾವಿ ಎಚ್ಚರಿಕೆ ವಹಿಸುವುದನ್ನು ಬಿಟ್ಟು, ದೊಡ್ಡ ದುರಂತಗಳು ಸಂಭವಿಸಿದ ನಂತರವೇ ಸರ್ಕಾರ ಮತ್ತು ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದೇಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us