ವಿಜಯೇಂದ್ರ ವಹಿಸಿಕೊಂಡ ಬಳಿಕ ನೂತನ ಅಧ್ಯಕ್ಷರ ಜೊತೆ ಗ್ರೂಪ್ ಫೋಟೋಗಾಗಿ ನೂಕುನುಗ್ಗಲು!

ಅರುಣ್​ ಕುಮಾರ್​ ಬೆಳ್ಳಿ

Updated on: Nov 15, 2023 | 12:44 PM

ಸಮಾರಂಭದಲ್ಲಿ ಕೆಲ ನಾಯಕ ಅನುಪಸ್ಥಿತಿ ಕಂಡುಬಂದಿದ್ದು ನಿಜವಾದರೂ ಹಲವಾರು ಪ್ರಮುಖ ನಾಯಕರು ಹಾಜರಿದ್ದರು. ಅಧ್ಯಕ್ಷರ ಕೋಣೆಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಗ್ರೂಪ್ ಫೋಟೋಗಾಗಿ ವೇದಿಕೆ ಮೇಲೆ ಸೇರಿದರು.

ಬೆಂಗಳೂರು: ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮದ ವಾತಾವರಣ. ಬಿವೈ ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ಕೆಲ ನಾಯಕ ಅನುಪಸ್ಥಿತಿ ಕಂಡುಬಂದಿದ್ದು ನಿಜವಾದರೂ ಹಲವಾರು ಪ್ರಮುಖ ನಾಯಕರು ಹಾಜರಿದ್ದರು. ಅಧ್ಯಕ್ಷರ ಕೋಣೆಯಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ (Nalin KumAr Kateel) ಸೇರಿದಂತೆ ಬಿಜೆಪಿ ನಾಯಕರು ಮಾಧ್ಯಮಗಳಿಗೆ ಗ್ರೂಪ್ ಫೋಟೋಗಾಗಿ ವೇದಿಕೆ ಮೇಲೆ ಸೇರಿದರು. ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಸಿಎನ್ ಅಶ್ವಥ್ ನಾರಾಯಣ, ಕೆಎಸ್ ಈಶ್ವರಪ್ಪ, ಬಿ ಶ್ರೀರಾಮುಲು, ಆರ್ ಅಶೋಕ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಮುನಿರತ್ನ ನಾಯ್ಡು, ಆರಗ ಜ್ಞಾನೇಂದ್ರ, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾಗಿರುವ ತೇಜಸ್ವಿ ಸೂರ್, ಬಿವೈ ರಾಘವೇಂದ್ರ, ಭಗವಂತ ಖೂಬಾ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಕಾರ್ಯಕ್ರಮ ನಿರೂಪಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.