ADGP visits Dy CM: ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 02, 2023 | 11:14 AM

ನಿನ್ನೆ ಬಿ ದಯಾನಂದ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳಬಹುದು.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಖಡಕ್ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ (Alok Kumar), ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ (Bengaluru police commissioner) ವಾಪಸ್ಸಾಗಲಿದ್ದಾರೆ ಅಂತ ಬಹಳಷ್ಟು ಜನ ಅಂದುಕೊಂಡಿದ್ದರು. ಆದರೆ, ಸಿಹೆಚ್ ಪ್ರತಾಪ್ ರೆಡ್ಡಿ ಅವರ ಸ್ಥಾನದಲ್ಲಿ ಸರ್ಕಾರ ದಕ್ಷ ಅಧಿಕಾರಿ ಬಿ ದಯಾನಂದರನ್ನು (B Dayanand) ನಗರದ ಪೊಲೀಸ್ ಕಮೀಶನರ್ ಆಗಿ ನೇಮಕ ಮಾಡಿದೆ. ನಿನ್ನೆ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದನ್ನು ನಾವು ವರದಿ ಮಾಡಿದ್ದೇವೆ. ಇಂದು ಬೆಳಗ್ಗೆ ಅಲೋಕ್ ಕುಮಾರ್ ಉಪ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.