ಕಾಂಗ್ರೆಸ್​ ಶಾಸಕಾಂಗ ಸಭೆ ಬಳಿಕ ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

Updated on: Aug 13, 2025 | 9:07 AM

ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರು ನಗರದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಬೆಂಗಳೂರಿನ ಆಡಳಿತ, ಮಹಾನಗರ ಪಾಲಿಕೆಗಳ ವಿಭಜನೆ ಮತ್ತು ಚುನಾವಣೆಗಳ ಸಿದ್ಧತೆಗಳ ಕುರಿತು ಚರ್ಚಿಸಲಾಗಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿರುವ ಅಫಿಡವಿಟ್‌ನಂತೆ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿರೂ ಆಗಿರುವ ಡಿಕೆ ಶಿವಕುಮಾರ್ ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಭೆಯಲ್ಲಿ ಬೆಂಗಳೂರು ನಗರದ ಶಾಸಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಬೆಂಗಳೂರಿನ ಆಡಳಿತದ ಬಗ್ಗೆ ಚರ್ಚಿಸಲಾಗಿದೆ ಎಂದರು.

ಬೆಂಗಳೂರು ಮಹಾನಗರ ಪಾಲಿಕೆಯ ವಿಭಜನೆ ಮತ್ತು ಐದು ಪಾಲಿಕೆಗಳ ರಚನೆಯ ಕುರಿತು ಸಹ ಚರ್ಚೆ ನಡೆದಿದೆ. ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕರಿಗೆ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಚುನಾವಣೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ