ಮುಂದುವರಿದ ವಿಜಯಲಕ್ಷ್ಮೀ ಟೆಂಪಲ್ ರನ್; ಅಮವಾಸ್ಯೆ ದಿನ ವಿಶೇಷ ಪೂಜೆ
ದರ್ಶನ್ ಸಿನಿಮಾ ಮಾಡಿಕೊಂಡು ಹಾಯಾಗಿ ಇದ್ದರು. ಆದರೆ, ಈಗ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಇದರಿಂದ ವಿಜಯಲಕ್ಷ್ಮಿ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಈ ಕಾರಣಕ್ಕೆ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಅರೆಸ್ಟ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಇಲ್ಲಿಯವರೆಗೆ ಅವರನ್ನು ಹೊರಗೆ ಕರೆತರೋಕೆ ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕವೇ ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪತಿ ಈ ಪ್ರಕರಣದಿಂದ ಹೊರಕ್ಕೆ ಬರಲಿ ಎಂದು ಅವರು ಕೋರಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಬೇರೆಬೇರೆ ಕಡೆಗಳಲ್ಲಿ ತೆರಳಿ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಆಗಸ್ಟ್ 4ರಂದು ಭೀಮನ ಅಮವಾಸ್ಯೆ ಇತ್ತು. ಹೀಗಾಗಿ, ವಿಜಯಲಕ್ಷ್ಮೀ ಅವರು ಬನಶಂಕರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಪತಿಯನ್ನು ಹೊರಕ್ಕೆ ತರಲು ಅವರು ಶಕ್ತಿ ದೇವತೆಗಳ ಮೋರೆ ಹೋಗಿದ್ದಾರೆ. ಇತ್ತೀಚೆಗೆ ವಿಜಯಲಕ್ಷ್ಮೀ ಕೊಲ್ಲೂರಿಗೆ ಭೇಟಿ ನೀಡಿ ನವಚಂಡಿಕಾ ಹೋಮ ಮಾಡಿಸಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos