ನಾಟಕೀಯ ಬೆಳವಣಿಗೆಗಳ ಬಳಿಕ ಆಂಧ್ರ ಪ್ರದೇಶ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಿದ ಸಿಐಡಿ ಅಧಿಕಾರಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Sep 09, 2023 | 10:32 AM

ಅವರನ್ನು ಬಂಧಿಸಲು ಹೋದ ಅಧಿಕಾರಿಗಳು ಟಿಡಿಪಿ ಕಾರ್ಯಕರ್ತರ ತೀವ್ರ ಪ್ರತಿರೋದ ಎದುರಿಸಬೇಕಾಯಿತು. ಹಾಲ್ ನಲ್ಲಿ ರಾತ್ರಿ 12 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ನಾಟಕೀಯ ಸನ್ನಿವೇಶಗಳು ನಡೆದವು. ಅಂತಿಮವಾಗಿ ನಾಯ್ಡುರನ್ನು ವಶಕ್ಕೆ ಪಡೆಯುವಲ್ಲಿ ಸಫಲರಾದ ಸಿಐಡಿ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥನ ಕಾರಲ್ಲೇ ಹಾಲ್ ನಿಂದ ತಮ್ಮ ಕಚೇರಿಗೆ ಕರೆದೊಯ್ದರು.

ನಂದ್ಯಾಲ (ಆಂಧ್ರ ಪ್ರದೇಶ): ನೆರೆರಾಜ್ಯ ಆಂಧ್ರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ ಆ ರಾಜ್ಯದ ಸಿಐಡಿ ಪೊಲೀಸ್ ಅಧಿಕಾರಿಗಳು (CID sleuths) ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶ ಪಕ್ಷದ (TDP) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (N Chandrababu Naidu) ಅವರನ್ನು ನಾಟಕೀಯ ಸನ್ನಿವೇಶಗಳ ಬಳಿಕ ಬಂಧಿಸಿದರು. ರಾಜ್ಯ ಪೊಲೀಸ್ ಶುಕ್ರವಾರ ಹೊರಡಿಸಿರುವ ಪ್ರಕಟಣೆಯೊಂದರ ಪ್ರಕಾರ ನಾಯ್ಡು ಅವರನ್ನು ಭ್ರಷ್ಟಾಚಾರದ ಅರೋಪವೊಂದರಲ್ಲಿ ಅರೆಸ್ಟ್ ಮಾಡಲಾಗಿದೆ. ಶುಕ್ರವಾರ ರಾತ್ರಿ ಸಿಐಡಿ ಅಧಿಕಾರಿಗಳು ನಾಯ್ಡುರನ್ನು ವಶಕ್ಕೆ ಪಡೆಯಲು ಹೋದಾಗ ಅವರು ನಂದ್ಯಾಲದ ಜ್ಞಾನಪುರಂನಲ್ಲಿರುವ ಆರ್ ಕೆ ಫಂಕ್ಷನ್ ಹಾಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ. ಅವರನ್ನು ಬಂಧಿಸಲು ಹೋದ ಅಧಿಕಾರಿಗಳು ಟಿಡಿಪಿ ಕಾರ್ಯಕರ್ತರ ತೀವ್ರ ಪ್ರತಿರೋದ ಎದುರಿಸಬೇಕಾಯಿತು. ಹಾಲ್ ನಲ್ಲಿ ರಾತ್ರಿ 12 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ನಾಟಕೀಯ ಸನ್ನಿವೇಶಗಳು ನಡೆದವು. ಅಂತಿಮವಾಗಿ ನಾಯ್ಡುರನ್ನು ವಶಕ್ಕೆ ಪಡೆಯುವಲ್ಲಿ ಸಫಲರಾದ ಸಿಐಡಿ ಅಧಿಕಾರಿಗಳು ಟಿಡಿಪಿ ಮುಖ್ಯಸ್ಥನ ಕಾರಲ್ಲೇ ಹಾಲ್ ನಿಂದ ತಮ್ಮ ಕಚೇರಿಗೆ ಕರೆದೊಯ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.