ಫುಟ್ಪಾತ್​​, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ

Edited By:

Updated on: Jul 21, 2026 | 12:45 PM

Bengaluru News: ಫುಟ್‌ಪಾತ್ ಮತ್ತು ಬಿಡಾಡಿ ವಾಹನಗಳ ತೆರವಿನ ಬೆನ್ನಲ್ಲೇ, ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬಾಕಿ ಉಳಿದಿರುವ 260 ಕಿ.ಮೀ. ರಾಜಕಾಲುವೆ ಅಭಿವೃದ್ಧಿಪಡಿಸಲು ಹಾಗೂ ಒತ್ತುವರಿ ತೆರವುಗೊಳಿಸಲು ನಿರ್ಧರಿಸಿರೋದಾಗಿ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಹೀಗಾಗಿ ರಾಜಕಾಲುವೆ ಒತ್ತುವರಿದಾರರಿಗೆ ಜಿಬಿಎಯಿಂದ ಬಿಗ್​​ ಶಾಕ್​​ ಸಗೋದು ಕನ್ಫರ್ಮ್​​ ಆಗಿದೆ.

ಬೆಂಗಳೂರು, ಜುಲೈ 21: ಫುಟ್ಪಾತ್​​, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಕೂಡ ಮಾಡುತ್ತೇವೆ. ಬೆಂಗಳೂರಿನಲ್ಲಿ 860 ಕಿ.ಮೀ. ರಾಜಕಾಲುವೆ ವ್ಯಾಪ್ತಿ ಇದ್ದು, ಈಗಾಗಲೇ ಅಂದಾಜು 600 ಕಿ.ಮೀ. ವ್ಯಾಪ್ತಿ ಅಭಿವೃದ್ಧಿ ಮಾಡಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 400 ಕಿ.ಮೀ. ಮತ್ತು ಬಿಜೆಪಿ ಅವರ ಅಧಿಕಾರಾವಧಿಯಲ್ಲಿ 150 ಕಿ.ಮೀ. ಅಭಿವೃದ್ಧಿಯಾಗಿದೆ. ಹೀಗಾಗಿ ಉಳಿದಿರುವ 260 ಕಿ.ಮೀ. ರಾಜಕಾಲುವೆ ಅಭಿವೃದ್ಧಿ ಆಗಬೇಕಿದೆ. ವಿಶ್ವ ಬ್ಯಾಂಕ್ ಸಹಾಯದೊಂದಿಗೆ ಈ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುತ್ತೇವೆ. ಈ ವೇಳೆ ಒತ್ತುವರಿ ತೆರವು ಕೂಡ ಮಾಡಿಯೇ ಮಾಡುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More