ಗಿಲ್ಲಿ ಬಳಿಕ ಸೂರಜ್ ಜೊತೆ ಕಿರಿಕ್ ಮಾಡಿಕೊಂಡ ರಿಷಾ ಗೌಡ

Updated on: Nov 05, 2025 | 8:59 AM

ಬಿಗ್ ಬಾಸ್ ಮನೆಯಲ್ಲಿರುವ ರಿಷಾ ಗೌಡ ಅವರು ಸದಾ ಕಿರಿಕ್ ಮಾಡುತ್ತಲೇ ಸುದ್ದಿ ಆಗುತ್ತಿದ್ದಾರೆ. ಈಗ ಅವರು ದೊಡ್ಮನೆಯಲ್ಲಿ ಗಿಲ್ಲಿ ನಟನ ಜೊತೆ ಜಗಳ ಮಾಡಿಕೊಂಡಿದ್ದರು. ಈಗ ರಿಷಾ ಅವರ ಜಗಳ ಸೂರಜ್ ಜೊತೆ ನಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ಗಿಲ್ಲಿ ನಟ ಹಾಗೂ ರಿಷಾ ಗೌಡ ಮಧ್ಯೆ ಕಿರಿಕ್ ಆಗಿತ್ತು. ಇದಾದ ಬಳಿಕ ರಿಷಾ ಗೌಡ ಅವರು ಸೂರಜ್ ಜೊತೆ ಫೈಟ್​ಗೆ ಇಳಿದಿದ್ದಾರೆ. ಸೂರಜ್ ಮಸಿ ಬಳಿದ ಎಂಬ ವಿಚಾರವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರು ಹಗೆ ತೀರಿಸಿಕೊಳ್ಳಲು ರೆಡಿ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇಂದು ರಿಲೀಸ್ ಆಗಿರೋ ಪ್ರೋಮೋದಲ್ಲಿ ಸೂರಜ್ ಹಾಗೂ ರಿಷಾ ಮಧ್ಯೆ ಕಿರಿಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More