ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುವೆ: ಸುಮಲತಾ ಅಂಬರೀಶ್
ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಪಕ್ಷದ ವರಿಷ್ಟರು ಹೇಳುತ್ತಿದ್ದಾರೆ ಮತ್ತು ತನಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆ. ನಿನ್ನೆ ತಮ್ಮನ್ನು ಬೇಟಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ತನಗೆ ಅದೇ ಮಾತನ್ನು ಹೇಳಿದ್ದಾರೆ. ಆದರೆ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಸುಮಲತಾ ಹೇಳಿದರು.
ಬೆಂಗಳೂರು: ಸುಮಲತಾ ಅಂಬರೀಶ್ (Sumalatha Ambareesh) ತಮ್ಮ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ಗೊಂದಲವೂ ಇರಬಹುದು. ತಮ್ಮ ಬೆಂಬಲಿಗರು ಏನು ಹೇಳುತ್ತಾರೆ ಅಂತ ತಿಳಿದುಕೊಳ್ಳಲು ಅವರು ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭಿಮಾನಿಗಳನ್ನು (supporters) ಬೆಂಗಳೂರುಗೆ ಬರಹೇಳಿದ್ದರು. ನಗರದಲ್ಲಿರುವ ಅವರ ನಿವಾಸಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಬೆಂಬಲಿಗರು ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ (independent candidate) ಸ್ಪರ್ಧಿಸುಂತೆ ಒತ್ತಾಯ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಪಕ್ಷದ ವರಿಷ್ಟರು ಹೇಳುತ್ತಿದ್ದಾರೆ ಮತ್ತು ತನಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆ. ನಿನ್ನೆ ತಮ್ಮನ್ನು ಬೇಟಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ತನಗೆ ಅದೇ ಮಾತನ್ನು ಹೇಳಿದ್ದಾರೆ. ಆದರೆ ಬೆಂಬಲಿಗರು ಮಂಡ್ಯದಿಂದ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಸುಮಲತಾ ಹೇಳಿದರು. ಇನ್ನೂ ಯಾವುದನ್ನೂ ನಿರ್ಧರಿಸಿಲ್ಲ, ಏಪ್ರಿಲ್ 3 ರಂದು ಕಾರ್ಯಕರ್ತರ ಜೊತೆ ಮತ್ತೊಂದು ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಸುಮಲತಾ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಓದಿ: ಮಂಡ್ಯ ಸಂಸದೆ ಮನವೊಲಿಕೆಗೆ ವಿಜಯೇಂದ್ರ ಕಸರತ್ತು, ಸುಮಲತಾ ಅಂಬರೀಶ್ ಹೇಳಿದ್ದೇನು?