ಕನಸು ಈಡೇರಿತು; ಮುಂಬೈ ಬೀದಿಗಳಲ್ಲಿ ಪುಷ್ಪವೃಷ್ಟಿ ಸುರಿಸಿ ರಿಷಬ್​ ಶೆಟ್ಟಿಗೆ ಸ್ವಾಗತ

Edited By:

Updated on: Oct 12, 2025 | 9:19 AM

Rishab Shetty At Mumbai: ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈಗ ಅವರು ಮುಂಬೈ ಬೀದಿಗಳಲ್ಲಿ ತೆರಳುವಾಗ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಈ ಸಂದರ್ಭದ ವಿಡಿಯೋನ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅವರಿಗೆ ಶುಭಾಶಯ ತಿಳಿಸಲಾಗುತ್ತಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದು ಗೊತ್ತೇ ಇದೆ. ಕರ್ನಾಟಕ ಮಾತ್ರವಲ್ಲ, ಪರಭಾಷೆಯಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ಮುಂಬೈಗೆ ತೆರಳಿದ್ದಾರೆ. ಕಾರಿನ ಸನ್​ರೂಫ್ ಮೂಲಕ ಹೊರ ಬಂದ ಅವರಿಗೆ ಪುಷ್ಪವೃಷ್ಟಿ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಎಲ್ಲಾ ತಂತ್ರಜ್ಞರಿಗೂ ಹೀಗೊಂದು ಕನಸು ಇರುತ್ತದೆ. ಅದು ಈಡೇರಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Oct 12, 2025 09:16 AM
Follow Us
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More