ಪ್ರಧಾನಿ ನರೇಂದ್ರ ಮೋದಿ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ ಸಿದ್ದರಾಮಯ್ಯ
ಪ್ರಧಾನಿಯವರಿಗೆ ನೀಡಿದಂಥ ನೆನಪಿನ ಕಾಣಿಕೆಯನ್ನು ರಾಜ್ಯದ ಜನತೆಯ ಪರ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ನೀಡಿದರು.
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ದೆಹಲಿಯಲ್ಲಿ ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಮಾತ್ರ ಭೇಟಿಯಾಗಲಿಲ್ಲ. ಕೇಂದ್ರ ಹಣಕಾಸು ಸಚಿವೆ ಮತ್ತು ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನೂ ಭೇಟಿಯಾದರು. ಪ್ರಧಾನಿಯವರನ್ನು ಸತ್ಕರಿಸಿದಂತೆ, ನಿರ್ಮಲಾ ಅವರಿಗೂ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಗಂಧದ ಹಾರ ಹಾಕಿ, ಹಳದಿ ವರ್ಣದ ಶಾಲನ್ನು ಹೊದಿಸಿ ಸತ್ಕರಿಸಿದರು. ಪ್ರಧಾನಿಯವರಿಗೆ ನೀಡಿದಂಥ ನೆನಪಿನ ಕಾಣಿಕೆಯನ್ನು ರಾಜ್ಯದ ಜನತೆಯ ಪರ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ನೀಡಿದರು. ಈ ಸಂದರ್ಭದಲ್ಲಿ ಸಂಸತ್ ಭವನದಲ್ಲಿ ಮುಖ್ಯಮಂತ್ರಿಗಳ ಜೊತೆ ವಿಧಾನ ಪರಿಷತ್ ಸದಸ್ಯ ಕೆ ಗೋವಿಂದರಾಜು ಮತ್ತು ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿಬಿ ಜಯಚಂದ್ರ ಇದ್ದರು. ಕೇಂದ್ರ ಹಣಕಾಸು ಸಚಿವೆಯೊಂದಿಗೆ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಸಿದ್ದರಾಮಯ್ಯ ಚರ್ಚಿಸಿದರೆಂಬ ಮಾಹಿತಿ ಲಭ್ಯವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

