ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

Updated on: Apr 16, 2026 | 1:55 PM

ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಿಸಿರುವ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷವು ಹಿಂದಿನ ಭರವಸೆಗಳನ್ನು ಉಲ್ಲಂಘಿಸಿ, ನಿರ್ದಿಷ್ಟ ಕುಟುಂಬಕ್ಕೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 2023ರ ಭರವಸೆಗಳು ಈಡೇರದ ಕಾರಣ ಮುಸ್ಲಿಂ ಸಮುದಾಯ ಅಸಮಾಧಾನಗೊಂಡಿದೆ.

ಬೆಂಗಳೂರು, ಏಪ್ರಿಲ್ 16: ಕಾಂಗ್ರೆಸ್ ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ನಿರಾಕರಣೆ ಮತ್ತು ಪಕ್ಷದೊಳಗಿನ ಅವರ ಸ್ಥಾನಮಾನದ ಕುರಿತು ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನ ನಿರ್ಧಾರವನ್ನು ಬೆಂಗಳೂರಿನಲ್ಲಿ ಕಟುವಾಗಿ ಟೀಕಿಸಿರುವ ಮುಖಂಡರು, ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ನಡೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಸಚಿವ, ಅವರ ಪತ್ನಿ ಸಂಸದೆ, ಈಗ ಮಗನಿಗೆ ಉಪಚುನಾವಣೆ ಟಿಕೆಟ್ ನೀಡಿರುವ ಬಗ್ಗೆ ಪ್ರಶ್ನೆಗಳು ಎದ್ದಿವೆ. ಒಂದು ಉಪಚುನಾವಣೆಗಾಗಿ ಮತ್ತು ಒಂದು ಕುಟುಂಬಕ್ಕಾಗಿ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಧಾರ್ಮಿಕ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2023ರಲ್ಲಿ ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಟಿಕೆಟ್ ಕೋರಿದ್ದಾಗ, ಶಿವಶಂಕರಪ್ಪ ಅವರು ಹಾಲಿ ಶಾಸಕರಾಗಿರುವುದರಿಂದ ಅವರಿಗೆ ಟಿಕೆಟ್ ನೀಡುವುದು ಅಗತ್ಯ ಎಂದು ಪಕ್ಷ ಹೇಳಿತ್ತು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ ಈಗ ವಂಚಿಸಲಾಗಿದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More