ಪ್ರಜ್ವಲ್ ಬೆಂಗಳೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಕುಟುಂಬ ಸಮೇತ ರಿಲ್ಯಾಕ್ಸ್ ಮೂಡಿಗೆ ಜಾರಿದ ಕುಮಾರಸ್ವಾಮಿ
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲೇ ಅಜ್ಞಾತವಾಸ ಮುಗಿಸಿ ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇದರ ಮಧ್ಯೆ ಪ್ರಜ್ವಲ್ ರೇವಣ್ಣ ಪ್ರಕರಣದ ಟೆನ್ಷನ್ ಮರೆತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಕುಟುಂಬ ಸಮೇತ ಕಬಿನಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಬೆಂಗಳೂರು, ಮೇ 30: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಏಪ್ರಿಲ್ 26 ರಿಂದ ತಲೆ ಮರೆಸಿಕೊಂಡಿದ್ದರು. ವಿದೇಶದಲ್ಲೇ ಅಜ್ಞಾತವಾಗಿದ್ದ ಪ್ರಜ್ವಲ್ ಕೊನೆಗೂ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ. ಈಗಾಗಲೇ ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರಿಗೆ ಹೊರಟಿರುವ ಸಂಸದ ಮಧ್ಯರಾತ್ರಿ ಬಂದಿಳಿಯಲ್ಲಿದ್ದಾರೆ. ಇಷ್ಟೇಲ್ಲ ಬೆಳವಣಿಗೆಗಳ ಮಧ್ಯೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಕುಟುಂಬ ಸಮೇತ ಕಬಿನಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರಜ್ವಲ್ ಬರುವುದಕ್ಕೂ ಮುಂಚೆ, ನಿನಗೆ ನನ್ನ ಮತ್ತು ಹೆಚ್ಡಿ ದೇವೇಗೌಡರ ಮೇಲೆ ಗೌರವ ಇದ್ದರೆ, ನಿನ್ನು ಎಲ್ಲೇ ಇದ್ದರೂ ಬಂದು ಅರೆಸ್ಟ್ ಆಗುವಂತೆ ಮನವಿ ಮಾಡಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 30, 2024 09:29 PM
Loading...
Unable to load recommendations.
Follow Us