ಪೂರ್ಣಾವಧಿ ಸರ್ಕಾರ ನಡೆಸಿದ ಬಳಿಕ ನಡೆದಿರುವ ಚುನಾವಣೆಗಳಲ್ಲೆಲ್ಲ ಕಾಂಗ್ರೆಸ್ ದಯನೀಯವಾಗಿ ನೆಲಕಚ್ಚಿದೆ: ಹೆಚ್ ಡಿ ಕುಮಾರಸ್ವಾಮಿ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 21, 2022 | 4:27 PM

ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50-70 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮಂಡ್ಯ: ಜೆಡಿ(ಎಸ್) ಪಕ್ಷದ ಪಂಚರತ್ನ ಕಾರ್ಯಕ್ರಮ (Pancharatna Program) ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ರೈತ ಸಮುದಾಯಕ್ಕೆ ಬಹಳ ಇಷ್ಟವಾಗಿದೆ, ಹಾಗಾಗಿ ಮಣ್ಣಿನ ಮಕ್ಕಳ ಪಕ್ಷವೇ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಹಿರಿಯ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಮಂಡ್ಯದಲ್ಲಿ ಹೇಳಿದರು. ಕಾಂಗ್ರೆಸ್ (Congress) ಪಕ್ಷದ ಬಗ್ಗೆ ಮಾತಾಡಿದ ಅವರು, ಅ ಪಕ್ಷ 5 ವರ್ಷ ಅಧಿಕಾರ ನಡೆಸಿದ ಬಳಿಕ ನಡೆದ ಚುನಾವಣೆಗಳಲ್ಲಿ ದಯನೀಯವಾಗಿ ಸೋತಿದೆ. ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 50-70 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ