ಶೋಭಾ ಕರಂದ್ಲಾಜೆ ಹೇಳಿಕೆ ಬಳಿಕ ಕ್ಷೇತ್ರದಲ್ಲಿ ಓಡಾಡಲು ಖುದ್ದು ನನಗೆ ಭಯವಾಗುತ್ತಿದೆ: ಎಸ್ ಟಿ ಸೋಮಶೇಖರ್

ಶೋಭಾ ಕರಂದ್ಲಾಜೆ ಹೇಳಿಕೆ ಬಳಿಕ ಕ್ಷೇತ್ರದಲ್ಲಿ ಓಡಾಡಲು ಖುದ್ದು ನನಗೆ ಭಯವಾಗುತ್ತಿದೆ: ಎಸ್ ಟಿ ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 21, 2024 | 3:11 PM

ತಾನು 10 ವರ್ಷಗಳಿಂದ ಶಾಸಕ ಮತ್ತು ಮಂತ್ರಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದ ಭಾಗವಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿದ ಸೋಮಶೇಖರ್, ಈ ಎಲ್ಲ ಅವಧಿಯಲ್ಲಿ ಒಂದೇ ಗಲಭೆ ನಡೆದಿಲ್ಲ, ಆದರೆ ಈ ಸಲ ಟಿಕೆಟ್ ಗಿಟ್ಟಿಸಿರುವ ಶೋಭಾ ಕರಂದ್ಲಾಜೆ ಅಲ್ಲಿಂದ ಗೆಲ್ಲುವ ಮೊದಲೇ ಅಸಂಬದ್ಧ ಮತ್ತು ಮತೀಯ ಗಲಾಟೆಗಳಿಗೆ ಉತ್ತೇಜನ ನೀಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸೋಮಶೇಖರ್ ಹೇಳಿದರು,

ಬೆಂಗಳೂರು: ವಿವಾದಿತ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ (ST Somashekhar) ಇಂದು ತಮ್ಮಂತೆಯೇ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಶಿವರಾಂ ಹೆಬ್ಬಾರ್ (Shivaram Hebbar) ಅವರೊಂದಿಗೆ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪರನ್ನು (BS Yediyurappa) ಅವರ ನಿವಾಸದಲ್ಲಿ ಭೇಟಿ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಶೇಖರ್, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಬೆಂಕಿಯುಗುಳಿದರು. ಡಿವಿ ಸದಾನಂದಗೌಡರು ಕ್ಷೇತ್ರವನ್ನು 10 ವರ್ಷಗಳ ಕಾಲ ಸಂಸತ್ತಿನಲ್ಲಿ ಪ್ರತಿನಿಧಿಸುವ ಮೊದಲು ಡಿಬಿ ಚಂದ್ರೇಗೌಡರು ಅಲ್ಲಿನ ಎಂಪಿಯಾಗಿದ್ದರು. ತಾನು 10 ವರ್ಷಗಳಿಂದ ಶಾಸಕ ಮತ್ತು ಮಂತ್ರಿಯಾಗಿ ಬೆಂಗಳೂರು ಉತ್ತರ ಕ್ಷೇತ್ರದ ಭಾಗವಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿದ ಸೋಮಶೇಖರ್, ಈ ಎಲ್ಲ ಅವಧಿಯಲ್ಲಿ ಒಂದೇ ಗಲಭೆ ನಡೆದಿಲ್ಲ, ಆದರೆ ಈ ಸಲ ಟಿಕೆಟ್ ಗಿಟ್ಟಿಸಿರುವ ಶೋಭಾ ಕರಂದ್ಲಾಜೆ ಅಲ್ಲಿಂದ ಗೆಲ್ಲುವ ಮೊದಲೇ ಅಸಂಬದ್ಧ ಮತ್ತು ಮತೀಯ ಗಲಾಟೆಗಳಿಗೆ ಉತ್ತೇಜನ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಬೆಂಗಳೂರು ಒಂದು ಶಾಂತಿಪ್ರಿಯ ನಗರವೆನ್ನುವುದನ್ನು ಶೋಭಾ ಮನಗಾಣಬೇಕು. ಅವರ ಹೇಳಿಕೆಗಳಿಂದಾಗಿ ಖುದ್ದು ತನಗೆ ಕ್ಷೇತ್ರದಲ್ಲಿ ಓಡಾಡಲು ಭಯವಾಗುತ್ತಿದೆ, ಯಾವ ಸಮಯದಲ್ಲಿ ಏನು ನಡೆಯಲಿದೆಯೋ ಅಂತ ಆತಂಕ ಶುರುವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಅನ್ಯಾಯದ ವಿರುದ್ಧ ಧ್ವನಿಯೆತ್ತದೆ ಶೋಭಾ ಕರಂದ್ಲಾಜೆ ರಾಜ್ಯದ ಜನತೆಗೆ ದ್ರೋಹವೆಸಗಿದ್ದಾರೆ: ಸಿದ್ದರಾಮಯ್ಯ