Karnataka Assembly Polls: ಚುನಾವಣೆಯಲ್ಲಿ ಸೋತ ಬಳಿಕ ಸಿಟಿ ರವಿ ಮಾತುಗಳಲ್ಲಿ ವೈರಾಗ್ಯದ ಭಾವ ಕಾಣುತ್ತಿದೆ
ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಅನ್ನೋದು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವಿಷಯ ಎಂದು ಸಿಟಿ ರವಿ ಹೇಳಿದರು.
ಬೆಂಗಳೂರು: ಚಿಕ್ಕಮಗಳೂರಲ್ಲಿ ನಾಲ್ಕು ಬಾರು ಗೆದ್ದು ಈ ಬಾರಿ ತಮ್ಮೊಂದಿಗೆ ಗುರುತಿಸಿಕೊಂಡು ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷ ಸೇರಿದ್ದ ಹೆಚ್ ಡಿ ತಮ್ಮಯ್ಯ (HD Thammaiah) ವಿರುದ್ಧ ಸೋತ ಸಿಟಿ ರವಿಯವರ (CT Ravi) ಮಾತಿನ ಧೋರಣೆಯಲ್ಲಿ ಭಾರೀ ವ್ಯತ್ಯಾಸ ಕಾಣುತ್ತಿದೆ. ನಿಖರವಾಗಿ ಹೇಳಬೇಕೆಂದರೆ ವೈರಾಗ್ಯದ ಭಾವ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿ ಮತ್ತು ಬಿಜೆಪಿ ಪ್ರಾರಂಭಿಸಿದ್ದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಲಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕಾರಣವಿಲ್ಲ ಎಂದು ನಗರದ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದರು. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ತನಗೆ ಸಂಘಟನೆ ಕೆಲಸದಲ್ಲಿ ಯಾವುದೇ ಸ್ಥಾನಮಾನದ ಆಸೆಯಿಲ್ಲ ಎಂದ ರವಿ, ಒಬ್ಬ ಕಾರ್ಯಕರ್ತನಾಗಿ ಅದರಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುವುದಾಗಿ ಹೇಳಿದರು. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಅನ್ನೋದು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವಿಷಯ ಎಂದು ಸಿಟಿ ರವಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ