ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಹೆಚ್ ಡಿ ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Sep 06, 2023 | 12:05 PM

ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ.

ಬೆಂಗಳೂರು: ಕಳೆದ ವಾರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಇಂದು ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಕುಮಾರಸ್ವಾಮಿಗೆ ಮೈಲ್ಡ್ ಸ್ಟ್ರೋಕ್ (mild stroke) ಆಗಿತ್ತು ಎಂದು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದರು. ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಜನ ಹೋಗಿ ಭೇಟಿಯಾಗುತ್ತಿದ್ದರೆ ರೆಸ್ಟ್ ಗೆ ಭಂಗವುಂಟಾಗುತ್ತದೆ. ರೋಗಿ ಚೇತರಿಸಿಕೊಂಡು ಮನೆಗ ಹೋದ ಮೇಲೆ ಭೇಟಿಯಾಗಿ ಮಾತಾಡಿಸುವುದು ಉತ್ತಮ ಪದ್ಧತಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.