ಬಳ್ಳಾರಿಯಲ್ಲಿ ಮೂರು ವಾರಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ರೀಓಪನ್; ಟಿವಿ9 ವರದಿ ಇಂಪ್ಯಾಕ್ಟ್!

Updated on: Feb 10, 2024 | 11:10 AM

ಕ್ಯಾಂಟೀನಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೇಳುವ ಪ್ರಕಾರ ಸರ್ಕಾರದಿಂದ ಸುಮಾರು ಕೋಟಿ ರೂ.ಗಳಷ್ಟು ಬಿಲ್ ಪಾವತಿಯಾಗಿರಲಿಲ್ಲ. 3 ಕೋಟಿ ರೂ. ಚಿಕ್ಕ ಮೊತ್ತವೇನಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಗಳ ಉದ್ದೇಶ ಅರ್ಥವಾಗಲ್ಲ. ಸಿದ್ದರಾಮಯ್ಯ ಸರ್ಕಾರ ಆಧಿಕಾರಕ್ಕೆ ಬರುವ ಮೊದಲು ರಾಜ್ಯವನ್ನಾಳುತ್ತಿದ್ದ ಬಿಜೆಪಿ ಸರ್ಕಾರಕ್ಕೆ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಉದಾಸೀನತೆ ಇತ್ತು.

ಬಳ್ಳಾರಿ: ನಗರದ ಮೋತಿ ಸರ್ಕಲ್ ನಲ್ಲಿರುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ (Indira Canteen) ಕಳೆದ ಮೂರು ಬಂದ್ ಆಗಿ, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಬಹಳ ತೊಂದರೆಯಾಗುತ್ತಿರುವ ಸಂಗತಿಯನ್ನು ಟಿವಿ9 ವರದಿ ಮಾಡಿತ್ತು. ಆ ವರದಿಯಿಂದ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ (district administration) ಎಚ್ಚೆತ್ತುಕೊಂಡಿವೆ. ಕ್ಯಾಂಟೀನಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೇಳುವ ಪ್ರಕಾರ ಸರ್ಕಾರದಿಂದ ಸುಮಾರು ಕೋಟಿ ರೂ.ಗಳಷ್ಟು ಬಿಲ್ ಪಾವತಿಯಾಗಿರಲಿಲ್ಲ (non remittance of bills). 3 ಕೋಟಿ ರೂ. ಚಿಕ್ಕ ಮೊತ್ತವೇನಲ್ಲ ಮಾರಾಯ್ರೇ! ಈ ಹಿನ್ನೆಲೆಯಲ್ಲಿ ಸರ್ಕಾರಗಳ ಉದ್ದೇಶ ಅರ್ಥವಾಗಲ್ಲ. ಸಿದ್ದರಾಮಯ್ಯ ಸರ್ಕಾರ ಆಧಿಕಾರಕ್ಕೆ ಬರುವ ಮೊದಲು ರಾಜ್ಯವನ್ನಾಳುತ್ತಿದ್ದ ಬಿಜೆಪಿ ಸರ್ಕಾರಕ್ಕೆ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಉದಾಸೀನತೆ ಇತ್ತು.

ಮೂರು ವರ್ಷಗಳಿಂದ ಬಿಲ್ ಗಳು ಬಾಕಿಯುಳಿದಿದ್ದವು ಅಂತ ಸಿಬ್ಬಂದಿ ಹೇಳುತ್ತಾರೆ. ಆದರೆ ಸಂತೋಷದ ಸಂಗತಿಯೆಂದರೆ, ಟಿವಿ9 ವರದಿ ಬಿತ್ತರಗೊಂಡ ಬಳಿಕ ಜಿಲ್ಲಾಡಳಿತ ಕ್ಯಾಂಟೀನ್ ನಡೆಸುವ ವ್ಯಕ್ತಿಯನ್ನು ಕರೆಸಿ ಮಾತಾಡಿದೆ ಮತ್ತು ಎಂಟ್ಹತ್ತು ದಿನಗಳಲ್ಲಿ ಬಿಲ್ ಗಳನ್ನು ಚುಕ್ತಾ ಮಾಡುವ ಭರವಸೆ ಸಹ ನೀಡಿದೆ. ಅದೇ ಹಿನ್ನೆಲೆಯಲ್ಲಿ ಕ್ಯಾಂಟೀನ್ ಓಪನ್ ಆಗಿದ್ದು ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸಂತಸವನ್ನುಂಟು ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 10, 2024 11:10 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More