Bigg Boss Kannada: ವೈಲ್ಡ್ ಕಾರ್ಡ್ ಎಂಟ್ರಿ ಬಳಿಕ ಬಿಗ್ ಬಾಸ್​ನಲ್ಲಿ ಸ್ಟಾರ್ಟ್ ಆಯ್ತು ಫೈಟ್; ನೆಲಕ್ಕೆ ಬಿದ್ದ ಸಂತೋಷ್

Updated on: Nov 28, 2023 | 10:19 AM

ಬಿಗ್ ಬಾಸ್ ಕನ್ನಡ: ದೊಡ್ಮನೆಯಲ್ಲಿ ಕಿತ್ತಾಟಗಳು ಹೊಸದಲ್ಲ. ಕಳೆದ ಎರಡು ವಾರಗಳಿಂದ ಬಿಗ್ ಬಾಸ್ ಮನೆ ಕೂಲ್ ಆಗಿತ್ತು. ಈಗ ಮತ್ತೆ ದೊಡ್ಮನೆಯಲ್ಲಿ ಕಲಹ ಶುರವಾಗಿದೆ. ಸ್ನೇಹಿತ್ ಹಾಗೂ ಸಂತೋಷ್ ಕಿತ್ತಾಡಿಕೊಂಡಿದ್ದಾರೆ.

‘ಬಿಗ್ ಬಾಸ್’ (Bigg Boss House) ಮನೆಯಲ್ಲಿ ಕಳೆದ ಕೆಲ ವಾರಗಳಿಂದ ಅಷ್ಟೊಂದು ದೊಡ್ಡ ಫೈಟ್ ನಡೆದಿರಲಿಲ್ಲ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೆ ಕಿತ್ತಾಟ ಶುರುವಾಗಿದೆ. ವೈಲ್ಡ್ ಕಾರ್ಡ್ ಮೂಲಕ ಅವಿನಾಶ್ ಶೆಟ್ಟಿ ಹಾಗೂ ಪವಿ ಪೂವಪ್ಪ ಎಂಟ್ರಿ ಆಗಿದೆ. ಈ ಬೆನ್ನಲ್ಲೇ ಕ್ಯಾಪ್ಟನ್ಸಿಗೆ ಟಾಸ್ಕ್ ಶುರುವಾಗಿದೆ. ಈ ವೇಳೆ ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರುವಾಗಿದೆ. ಸಂತೋಷ್ ಅವರನ್ನು ವಿನಯ್ ತಳ್ಳಿದ್ದಾರೆ. ಆ ಬಳಿಕ ಸ್ನೇಹಿತ್​ನ ಸಂತೋಷ್ ತಳ್ಳಿದ್ದಾರೆ. ಈ ಮೂಲಕ ದೊಡ್ಮನೆಯಲ್ಲಿ ಮತ್ತೆ ಕಲಹ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 28, 2023 09:22 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More