ಮತದಾರರ ಜೊತೆ ರಾಜನಂತೆ ವರ್ತಿಸಿರುವ ಕುಮಾರಸ್ವಾಮಿ ವಿಶ್ವಾಸ ಕಳೆದುಕೊಂಡಿದ್ದಾರೆ: ಯೋಗೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 31, 2024 | 1:11 PM

ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣದಿಂದ ಎರಡು ಬಾರಿ ಶಾಸಕರಾಗಿ ಒಮ್ಮೆ ಮುಖ್ಯಮಂತ್ರಿಯಾಗಿದ್ದರೂ ಕ್ಷೇತ್ರಕ್ಕಾಗಿ ಏನೂ ಮಾಡಿಲ್ಲ, ಒಬ್ಬ ರಾಜನಂತೆ ವರ್ತಿಸಿದ್ದಾರೆ, ಜನರೊಂದಿಗೆ ಸಂಪರ್ಕವಿಟ್ಟುಕೊಳ್ಳದ ಕಾರಣ ಅವರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಚುನಾವಣೆಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎನ್​ಡಿಎ ಒಕ್ಕೂಟದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದ್ದಾರೆ. ಶ್ರೀನಿವಾಸಪುರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್, ಸರ್ಕಾರ ಯಾವುದೇ ಇದ್ದರೂ ತನ್ನ ಮತ್ತು ಮತದಾರರ ನಡುವೆ ಇರುವ ಬಾಂಧವ್ಯ ಮತಗಳಲ್ಲಿ ಪರಿವರ್ತನೆಯಾಗುತ್ತದೆ ಎಂದು ಹೇಳಿದರು. ತಾನು ನಿರಂತರವಾಗಿ ಜನ ಸಂಪರ್ಕದಲ್ಲಿರುವ ಕಾರಣ ಗೆಲ್ಲುವ ಆತ್ಮವಿಶ್ವಾಸವಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣದಲ್ಲಿ ಜಾತಿ ಲೆಕ್ಕಾಚಾರ: ಮುಸ್ಲಿಂ ಮತಗಳ ಮೇಲೆ ಯೋಗೇಶ್ವರ್, ಜೆಡಿಎಸ್ ಕಣ್ಣು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.