ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು?​

|

Updated on: Jun 20, 2024 | 10:31 PM

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ.ಕೋರ್ಟ್ ಮತ್ತೆ ಕಸ್ಟಡಿಗೆ ನೀಡಿರೋದ್ರಿಂದ​ ತನಿಖೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು, ಜೂನ್​​ 20: ನಟ ದರ್ಶನ್ (Darshan) ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟಿ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ. ದರ್ಶನ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ನಗರದಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ, ಇನ್ನಷ್ಟು ತನಿಖೆ ಆಗಬೇಕು. ಕೋರ್ಟ್ ಮತ್ತೆ ಕಸ್ಟಡಿಗೆ ನೀಡಿರೋದ್ರಿಂದ​ ತನಿಖೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಸಂಪುಟ ಸಭೆಯಲ್ಲಿ ನಟ ದರ್ಶನ್ ಪ್ರಕರಣದ ಬಗ್ಗೆ ಚರ್ಚೆಯಾಗಿಲ್ಲ. ಯಾವ ಶಾಸಕರು, ಸಚಿವರು ಇಂತಹ ವಿಚಾರದಲ್ಲಿ ತಲೆಹಾಕುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ದರ್ಶನ್ ಪ್ರಕರಣ ಚರ್ಚೆಗೆ ಬಂದಿಲ್ಲ. ಕಾನೂನು ತನ್ನ ಕೆಲಸವನ್ನು ಗಟ್ಟಿಯಾಗಿ ಮಾಡ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.