AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ; ಭರ್ಜರಿ ಪೈಪೋಟಿ

ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ; ಭರ್ಜರಿ ಪೈಪೋಟಿ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Sep 14, 2026 | 6:56 PM

Share

ವಿಜಯಪುರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 22ರವರೆಗೆ ಅಗ್ನಿವೀರ್ ನೇಮಕಾತಿ ರ‍್ಯಾಲಿ ನಡೆಯುತ್ತಿದೆ. 11 ಜಿಲ್ಲೆಗಳಿಂದ ಸುಮಾರು 8,500 ಅಭ್ಯರ್ಥಿಗಳು ಭಾಗವಹಿಸಿದ್ದು, ಲಿಖಿತ ಪರೀಕ್ಷೆ ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗುತ್ತಿದೆ. ಕರ್ನಲ್ ಸೋಮು ನೇತೃತ್ವದಲ್ಲಿ ಅತ್ಯಂತ ಪಾರದರ್ಶಕವಾಗಿ ಪ್ರಕ್ರಿಯೆ ಸಾಗುತ್ತಿದೆ.

ವಿಜಯಪುರ, ಸೆಪ್ಟೆಂಬರ್​ 14: ವಿಜಯಪುರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆ ಸೆಪ್ಟೆಂಬರ್ 10ರಿಂದ ಆರಂಭಗೊಂಡಿದ್ದು, ಸೆ. 22ರವರೆಗೆ ನಡೆಯಲಿದೆ. ಕರ್ನಾಟಕದ 11 ಜಿಲ್ಲೆಗಳಿಂದ ಸುಮಾರು 8,500 ಅಭ್ಯರ್ಥಿಗಳು ಈ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಕರ್ನಲ್ ಸೋಮು ಮತ್ತು ಅವರ ತಂಡದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ, ಜೂನ್‌ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗಳಿಗೆ ಆಹ್ವಾನಿಸಲಾಗಿದೆ. ರನ್ನಿಂಗ್, ಜಿಗ್-ಜಾಗ್ ವಾಕ್, ಲಾಂಗ್ ಜಂಪ್ ಮತ್ತು ಡಿಪ್ಸ್ ಸೇರಿದಂತೆ ವಿವಿಧ ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ನಂತರ ಆರೋಗ್ಯ ಹಾಗೂ ವೈದ್ಯಕೀಯ ತಪಾಸಣೆ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More