ಕೆಆರ್ ಆಸ್ ಜಲಾಶಯದಿಂದ ವಿಸಿ ಮತ್ತು ಆಣೆಕಟ್ಟು ನಾಲೆಗಳಿಗೆ ಷರತ್ತಿನ ಮೇಲೆ ನೀರು ಹರಿಸುವ ಆದೇಶ ಹೊರಡಿಸಿದ ಕೃಷಿ ಇಲಾಖೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 10, 2023 | 12:40 PM

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಕೃಷ್ಣರಾಜಸಾಗರ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ ಕೆಆರ್ ಎಸ್ ಜಲಾಶಯಯದಲ್ಲಿ ನೀರಿನ ಒಳಹರಿವು ಆಧರಿಸಿ ನೀರನ್ನು ಹರಿಸಲಾಗುವುದು.

ಮಂಡ್ಯ: ಮುಂಗಾರು ಬೆಳೆಗಳಿಗಾಗಿ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯದಿಂದ (KRS dam) ವಿಸಿ ನಾಲೆ ಮತ್ತು ಆಣೆಕಟ್ಟು ನಾಲೆಗಳಿಗೆ ಷರತ್ತಿನ ಆಧಾರದಲ್ಲಿ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಅವರ ನೇತೃತ್ವದಲ್ಲಿ ನಡೆದ ಕೃಷ್ಣರಾಜಸಾಗರ ಜಲಾಶಯ ನೀರಾವರಿ ಸಲಹಾ ಸಮಿತಿ (KRS Irrigation Advisory Committee) ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ ಕೆಆರ್ ಎಸ್ ಜಲಾಶಯಯದಲ್ಲಿ ನೀರಿನ ಒಳಹರಿವು ಆಧರಿಸಿ ನೀರನ್ನು ಹರಿಸಲಾಗುವುದು. ಆದರೆ ನೀರನ್ನು ದಿನಂಪ್ರತಿ ಹರಿಬಿಡಲಾಗದು ಮತ್ತು ದೀರ್ಘಾವಧಿಯ ಬೆಳೆಗಳನ್ನು ಬೆಳೆಯದಂತೆ ಅಧಿಕಾರಿಗಳು ರೈತರಿಗೆ ಸೂಚನೆ ನೀಡಿದ್ದಾರೆ. ಆಗಸ್ಟ್ 2023 ರಿಂದ ಡಿಸೆಂಬರ್ 2023ರವರೆಗೆ ಪ್ರತಿ ತಿಂಗಳು ನಾಲೆಗಳಿಗೆ 15 ದಿನ ದಿನ ಮಾತ್ರ ನೀರು ಹರಿಸುವ ಮತ್ತು ಉಳಿದ 15 ದಿನ ಸ್ಥಗಿತಗೊಳಿಸುವ ನಿಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.