ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು

Edited By:

Updated on: Aug 22, 2026 | 6:51 PM

ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಬರ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಮಾತನಾಡಿದ್ದು, ರಾಜ್ಯದ ರೈತರ ಬೆಳೆ , ನೀರಿನ ಲಭ್ಯತೆ ವಿಚಾರವಾಗಿ ಸಭೆ ಆಗಿದೆ. ಯಾವ ಬೆಳೆ ಹಾಕಿದ್ರೆ ರೈತರಿಗೆ ಅನುಕೂಲ ಎನ್ನುವ ಚರ್ಚೆಯಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರದಿಂದ ಏನು ಸಹಾಯ ಪಡೆಯಬಹುದು. ಬರದಲ್ಲಿ ರೈತರ ಬದುಕನ್ನು ಉಳಿಸಿಕೊಳ್ಳಬೇಕು. ರೈತರ ಬಿತ್ತನೆ ಎಷ್ಟಾಗಿದೆ, ಬೆಳೆ ಹಾನಿ‌ ಎಷ್ಟಾಗಿದೆ ಎಂದು ಕಂದಾಯ ಇಲಾಖೆ ಮುಖಾಂತರ ಕೇಂದ್ರಕ್ಕೆ ವರದಿ ಕಳುಹಿಸಲಾಗಿದೆ. ಈ ತಿಂಗಳ ಕೊನೆ ತನಕ ಏನು ಮಾಡಲು ಆಗುವುದಿಲ್ಲ. ಬಳಿಕ ಬರ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, (ಆಗಸ್ಟ್ 22): ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಬರ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಈ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಮಾತನಾಡಿದ್ದು, ರಾಜ್ಯದ ರೈತರ ಬೆಳೆ , ನೀರಿನ ಲಭ್ಯತೆ ವಿಚಾರವಾಗಿ ಸಭೆ ಆಗಿದೆ. ಯಾವ ಬೆಳೆ ಹಾಕಿದ್ರೆ ರೈತರಿಗೆ ಅನುಕೂಲ ಎನ್ನುವ ಚರ್ಚೆಯಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರದಿಂದ ಏನು ಸಹಾಯ ಪಡೆಯಬಹುದು. ಬರದಲ್ಲಿ ರೈತರ ಬದುಕನ್ನು ಉಳಿಸಿಕೊಳ್ಳಬೇಕು. ರೈತರ ಬಿತ್ತನೆ ಎಷ್ಟಾಗಿದೆ, ಬೆಳೆ ಹಾನಿ‌ ಎಷ್ಟಾಗಿದೆ ಎಂದು ಕಂದಾಯ ಇಲಾಖೆ ಮುಖಾಂತರ ಕೇಂದ್ರಕ್ಕೆ ವರದಿ ಕಳುಹಿಸಲಾಗಿದೆ. ಈ ತಿಂಗಳ ಕೊನೆ ತನಕ ಏನು ಮಾಡಲು ಆಗುವುದಿಲ್ಲ. ಬಳಿಕ ಬರ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಕೃಷಿಕಾರ್ಮಿಕ‌, ಕೂಲಿ ಕಾರ್ಮಿಕರ ವಿಚಾರವಾಗ ಚರ್ಚೆಯಾಗಿದೆ. ಬರ ಘೋಷಣೆ ಮಾಡುವುದು ಕೇಂದ್ರ, ಪೂರಕ ದಾಖಲೆ ಒದಗಿಸುವುದು ರಾಜ್ಯ ಸರ್ಕಾರ ಎಂದಿದ್ದಾರೆ. ಇದೇ ವೇಳೆ ಬರ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡ್ತೀರಾ ಎನ್ನುವ ಪ್ರಶ್ನೆಗೆ ಸಚಿವರು ಏನು ಹೇಳಿದ್ದಾರೆ ಕೇಳಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More